ಕಾಮಗಾರಿ

ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ.

ಕುಶಾಲನಗರ, ಅ. 29: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ರಸ್ತೆ‌ ಮತ್ತು ಹಿಂದೂ ರುದ್ರಭೂಮಿಗೆ ಸಂಪರ್ಕ ರಸ್ತೆಯ 9.40. ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತಾನಾಡಿದ ಶಾಸಕರು ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸುವ ಕ್ರಿಯಾ ಯೋಜನೆಯನ್ನು ಕೈಗೊಳ್ಳಲಾಗಿದೆ. ಅದರಂತೆ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಿಂದ ಚಿಕ್ಕತ್ತೂರು ಗ್ರಾಮದ ಮೂಲಕ ಹಾರಂಗಿ ಸಂಪರ್ಕ ರಸ್ತೆಯ ಕಾಮಗಾರಿಕ್ಕೆ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ. ಅದರ ಮೂಲಕ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯೆ ಫಿಲೋಮಿನಾ, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಟಿ.ಪಿ.ಹಮೀದ್, ಅರುಣ್ ರಾವ್, ಅನಂತ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಕೆ.ವಿ.ಸಣ್ಣಪ್ಪ, ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಎನ್. ಪ್ರಸನ್ನ , ಪಕ್ಷದ ಪ್ರಮುಖರಾದ ಹರೀಶ್, ಪ್ರಕಾಶ್, ಸಾವಿತ್ರಿ ರಾಜನ್, ಪವಿತ್ರ, ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಗುತ್ತಿಗೆದಾರ ಮಧು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!