ಕುಶಾಲನಗರ ಅ:29: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ,ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಡಿಸೆಂಬರ್ 28 ಮತ್ತು 29ರಂದು ಬಾಗಲೂರಿನ ವಿಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಹೇಳಿದರು.
ಅವರು ಇಂದು ಇಲ್ಲಿನ ವೀರಭೂಮಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪರಿಷತ್ತು ಆರಂಭವಾಗಿ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ದಾಟಿದ್ದು ಜಸ್ಟಿಸ್ ನಾಗಮೋಹನ್ ದಾಸ್ ಹಾಗೂ ಇಸ್ರೋದ ಮಾಜಿ ಅಧ್ಯಕ್ಷರು ಖ್ಯಾತ ವಿಜ್ಞಾನಿಗಳಾದ ಎ. ಎಸ್. ಕಿರಣ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಹಾಗೂ ಅನೇಕ ಚಿಂತಕರ ಸಲಹೆ ಮೇರೆಗೆ ರಾಜ್ಯಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಪರಿಷತ್ತು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು ಜನಪರವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ತನ್ನ ಸದಸ್ಯರನ್ನು ಹೊಂದಿದ ಹೆಗ್ಗಳಿಕೆ ಪರಿಷತ್ತಿಗೆ ಇದೆ. ಈಗಾಗಲೇ ಶಿವಮೊಗ್ಗ, ತುಮಕೂರು, ಲಿಂಗಸಗೂರು ನಲ್ಲಿ ಯಶಸ್ವಿಯಾಗಿ ಸಮ್ಮೇಳನಗಳನ್ನು ನಡೆಸಿದ್ದು ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಐತಿಹಾಸಿಕವಾಗಿ ನಡೆಸಲು ಸಕಲ ಸಿದ್ಧತೆಯನ್ನು ನಡೆಸಲಾಗಿದೆ.
ನಾಡಿನ ಹೆಸರಾಂತ ರಂಗಭೂಮಿ ಕಲಾವಿದೆ, ಚಲನಚಿತ್ರ ನಟಿ, ಸಾಮಾಜಿಕ ಕಳಕಳಿಯುಳ್ಳ ಸಾಂಸ್ಕೃತಿಕ ರಾಯಭಾರಿ ವ್ಯಕ್ತಿತ್ವದ ಉಮಾಶ್ರೀ ಅವರನ್ನು ಸಮ್ಮೇಳನದ ಸರ್ವಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಸಮ್ಮೇಳನವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಅನೇಕ ಮಂತ್ರಿಗಳು, ಕೇಂದ್ರ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ರಾಜ್ಯಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು ಅನೇಕ ಚಿಂತಕರು ಭಾಗವಹಿಸಲಿದ್ದಾರೆ ಸಚಿವರಾದ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ನಡೆಯುವ ಸಮ್ಮೇಳನಕ್ಕೆ ರಾಜ್ಯದ ಉದ್ದಗಲಕ್ಕೂ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ ರೂ.30,000ಕ್ಕೂ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರಮೇಳ, ಕರಕುಶಲ ವಸ್ತು ಪ್ರದರ್ಶನ ಮೊದಲಾದ ವಸ್ತು ಪ್ರದರ್ಶನಗಳ ಆಯೋಜಿಸಿದೆ ಎರಡು ದಿನ ನಡೆಯುವ ಸಮ್ಮೇಳನದಲ್ಲಿ ಬುದ್ಧನ ಬೆಳಕು ಹಾಗೂ ಕೆಂಪೇಗೌಡ ನಾಟಕ ಪ್ರದರ್ಶನವಾಗಲಿವೆ. ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳನ್ನು ಆಯೋಜಿಸಿದೆ ನಾಲ್ಕು ವಿಚಾರಗೋಷ್ಠಿಗಳು ನಡೆಯಲಿವೆ ವಿಶೇಷವಾಗಿ ಪರಿಷತ್ತಿನ ಮಹಾ ಅಧಿವೇಶನ ಆಯೋಜಿಸಿದೆ. ರಾಜ್ಯಮಟ್ಟದ ಜೀವಮಾನ ಸಾಧನ ಪ್ರಶಸ್ತಿಯನ್ನು ಹಾಗೂ ಪ್ರತಿ ಜಿಲ್ಲೆಗೆ ಒಬ್ಬರಂತೆ ಸುಮಾರು 37 ಜನರಿಗೆ ಎಚ್ಎನ್ ಪ್ರಶಸ್ತಿ , ಜೀವಮಾನ ಶ್ರೇಷ್ಠ ಸಾಧನ ಪ್ರಶಸ್ತಿಯನ್ನು 10 ಜನರಿಗೆ ನೀಡಲಾಗುತ್ತಿದ್ದು 10,000 ನಗದು ತಾಮ್ರ ಫಲಕ ಗೌರವ ಸಮರ್ಪಣೆ ನೀಡಿ ಗೌರವಿಸಲಾಗುವುದು ಪ್ರಮುಖವಾಗಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸಾಧಕರನ್ನು ಗುರುತಿಸಲಾಗಿದ್ದು ಜ್ಞಾನ ಪ್ರಕಾಶ ಸ್ವಾಮೀಜಿ ಮೈಸೂರು, ಬಿ ಆರ್ ಪಾಟೀಲ್, ಮೋಹನ್ ಆಳ್ವ, ಮಹಾಂತೇಶ್ ಗೌಡ ಪಾಟೀಲ್, ಲೀಲಾದೇವಿ ಆರ್ ಪ್ರಸಾದ್, ಶಿವ ಚಿತ್ತಪ್ಪ, ಡಾ. ಎಚ್. ಎಸ್. ಅನುಪಮಾ, ಕೆ ಶರೀಫ, ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಎಂ. ಎನ್. ಆಶಾದೇವಿ ಇವರಿಗೆ ನೀಡಲು ಪರಿಷತ್ತಿನ ರಾಜ್ಯಮಟ್ಟದ ಕಾರ್ಯಕಾರಿ ಸಮಿತಿಯಲ್ಲಿ ನಿರ್ಣಯಿಸಲಾಗಿದೆ.
ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ಮಹಿಳಾ ಕೇಂದ್ರಿತವಾಗಿ ವಿಭಿನ್ನವಾಗಿ ಆಯೋಜಿಸಲಾಗುತ್ತಿದ್ದು ಈ ಸಮ್ಮೇಳನಕ್ಕೆ ಹೊರ ಜಿಲ್ಲೆಯಿಂದ ಬರುವವರಿಗೆ ವಸತಿ ವ್ಯವಸ್ಥೆಯನ್ನು ಮಾಡಲಾಗಿದ್ದು ಭಾಗವಹಿಸಿದ ಎಲ್ಲರಿಗೂ ಎರಡು ದಿನಗಳ ಕಾಲ ಊಟ ಉಪಹಾರದ ವ್ಯವಸ್ಥೆಯನ್ನು ಮಾಡಲಾಗುವುದು.
ಸಾರ್ವಜನಿಕರು ವಿವಿಧ ಕ್ಷೇತ್ರಗಳ ಆಸಕ್ತರು ವಿದ್ಯಾರ್ಥಿಗಳು ಶಿಕ್ಷಕರು, ಉಪನ್ಯಾಸಕರು ನೌಕರರು,ಯುವಕರು, ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ ಈ ಸಂದರ್ಭದಲ್ಲಿ ಪರಿಷತ್ತಿನ ಪ್ರಮುಖರಾದ ಡಾ. ಆಂಜನಪ್ಪ,ವೈ.ಎನ್. ಶಂಕರೇಗೌಡ, ಡಾ.ಶ್ರೀರಾಮಚಂದ್ರಪ್ಪ, ಗೌರಿ ಪ್ರಸನ್ನ, ಸುಧಾಚಣ್ಣನವರ್, ಡಾ.ಉಶಾದೇವಿ, ಡಾ.ಚಿಕ್ಕಹನುಮಂತೇ ಗೌಡ, ಎಸ್. ವೈ. ಹೊಂಬಾಳ್, ವಿ.ಟಿ.ಸ್ವಾಮಿ, ಕೊಡಗು ಜಿಲ್ಲೆಯ ವನಿತಾ ಚಂದ್ರಮೋಹನ್ ಹಾಗೂ ಪಿ.ವಿ. ಸಿದ್ದಲಿಂಗಮ್ಮ, ಶರಣಬಸವ ಕಲ್ಲ, ಕೆ.ಎಸ್. ವಿಶ್ವನಾಥ್ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರು ಗೋಷ್ಠಿಯಲ್ಲಿ ಭಾಗವಹಿಸಿದ್ದರು
Back to top button
error: Content is protected !!