ಕುಶಾಲನಗರ, ಮಾ 10: ಕಾಡಾನೆ ದಾಳಿಯಿಂದ ಮೃತಪಟ್ಟ ವಾಲ್ನೂರು ತ್ಯಾಗತ್ತೂರು ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ ಅವರ ಬಾಳೆಗುಂಡಿ ನಿವಾಸಕ್ಕೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬದವರಿಗೆ ವೈಯಕ್ತಿಕ ಆರ್ಥಿಕ ಸಹಕಾರ ನೀಡಿದರು.
ಈ ಸಂದರ್ಭ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ, ಕೊಡಗು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್, ವಾಲ್ನೂರು ತ್ಯಾಗತ್ತೂರು ಗ್ರಾಪಂ ಮಾಜಿ ಸದಸ್ಯರಾದ ಭುವನ್, ಗಣೇಶ್, ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಮುರಳಿಮಾದಯ್ಯ ಮತ್ತಿತರರು ಇದ್ದರು.
Back to top button
error: Content is protected !!