ಕುಶಾಲನಗರ, ನ 08: ಕುಶಾಲನಗರ ಪುರಸಭೆ ವತಿಯಿಂದ ರೂ.30 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಹಾಗೂ ವ್ಯವಸ್ಥಿತವಾದ ವ್ಯಾಪಾರ ವಲಯ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ರಾಷ್ಟ್ರೀಯ ಜೀವನೋಪಾಯ ಅಭಿಯಾನ, ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಹಾಗೂ ಪುರಸಭೆ ವತಿಯಿಂದ ಶುಕ್ರವಾರ ಮಹಾಲಕ್ಷ್ಮಿ ಸಭಾಂಗಣದಲ್ಲಿ ಪಟ್ಟಣ ಮಾರಾಟ ಸಮಿತಿ ಸಭೆ ಆಯೋಜಿಸಲಾಗಿತ್ತು.
ಮಾರಾಟ ಸಮಿತಿ ಅಧ್ಯಕ್ಷರೂ ಆದ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಹಿತದೃಷ್ಟಿಯಿಂದ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಪಟ್ಟಣದ ನ್ಯಾಯಾಲಯ ಬಳಿ,ಖಾಸಗಿ ಬಸ್ ನಿಲ್ದಾಣ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಹಾಗೂ ಅರಣ್ಯ ಡಿಫೋದ ಬಳಿ ವ್ಯಾಪಾರ ವಲಯ ಗುರುತಿಸಲಾಗಿದೆ.ಈ ಬಗ್ಗೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಅಂತಿಮ ನಿರ್ಣಯ ಮಾಡಿ ಸರ್ಕಾರಕ್ಕೆ ಕಳುಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ಪಟ್ಟಣದಲ್ಲಿ122 ಮಂದಿ ಬೀದಿಬದಿ ವ್ಯಾಪಾರಿಗಳು ಇದ್ದಾರೆ. ಈ ಬೀದಿ ವ್ಯಾಪಾರವನ್ನೇ ಜೀವನೋಪಾಯಕ್ಕಾಗಿ ಕಂಡುಕೊಂಡಿದ್ದಾರೆ.ಜೊತೆಗೆ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆದ್ದರಿಂದ ಈ ವ್ಯಾಪಾರಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.
ಸಮುದಾಯ ಸಂಘಟನಾಧಿಕಾರಿ ಪೂರ್ಣಕಲಾ ಮಾತನಾಡಿ, ಪುರಸಭೆ ವತಿಯಿಂದ 392 ಮಂದಿಗೆ ಸಾಲ ಸೌಲಭ್ಯ ವಿತರಿಸಲಾಗಿದೆ.ಪ್ರಥಮ ಹಂತದಲ್ಲಿ ರೂ.10 ಸಾವಿರ ಹಾಗೂ ಎರಡನೇ ಹಂತದಲ್ಲಿ ರೂ.20 ಸಾವಿರ ,ನಂತರ ರೂ.50 ಸಾವಿರ ಸಾಲ ಸೌಲಭ್ಯ ವಿತರಿಸಲಾಗುತ್ತದೆ.ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಂಡು ತಮ್ಮ ಜೀವನಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾರಾಟ ವಲಯದ ಯೋಜನಾ ವರದಿ ತರಿಸುವ ಬಗ್ಗೆ, ಸ್ವನಿಧಿ ಸೇವಾ ಸಮೃದ್ಧಿ ಯೋಜನೆ ಅರ್ಹ ಫಲಾನುಭವಿಗಳಿಗೆ ಮತ್ತು ಕುಟುಂಬ ಸದಸ್ಯರುಗಳಿಗೆ ಲಿಂಕೇಜ್ ಮಾಡುವ ಬಗ್ಗೆ, ಬೀದಿ ಬದಿ ವ್ಯಾಪಾರಸ್ಥರನ್ನು ಡಿಜಿಟಲ್ ವಹಿವಾಟಿನಲ್ಲಿ ತೊಡಗಿಕೊಳ್ಳುವ ಬಗ್ಗೆ, ಬ್ಯಾಂಕ್ ಗಳ ವತಿಯಿಂದ ಕ್ಯೂ ಆರ್ ಕೋಡ್ ಸಕ್ರಿಯಗೊಳಿಸುವ ಬಗ್ಗೆ, ಪಿಎಂ ಸ್ವನಿಧಿ ಯೋಜನೆ ಅಭಿಯಾನ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭ ಸಂಚಾರಿ ಪೊಲೀಸ್ ಸಹಾಯಕ ನಿರೀಕ್ಷಕ ಬಿ.ಕೆ.ಹರೀಶ್, ಪುರಸಭೆ ಕಂದಾಯ ನಿರೀಕ್ಷಕ ಸೋಮಶೇಖರ್, ಹಿರಿಯ ಆರೋಗ್ಯ ನಿರೀಕ್ಷಕ ಉದಯಕುಮಾರ್, ಸಮುದಾಯ ಸಂಘಟನಾಧಿಕಾರಿ ಪೂರ್ಣಕಲಾ ಸಿಬ್ಬಂದಿಗಳು ದಾಕ್ಷಾಯಿಣಿ, ಶೃತಿ,ವಿವಿಧ ಬ್ಯಾಂಕ್ ಅಧಿಕಾರಿ, ಸಿಬ್ಬಂದಿಗಳು,
ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಆದಂ,ಬೀದಿ ಬದಿ ವ್ಯಾಪಾರಿಗಳಾದ ಸಲೀನಾ ಡಿ.ಕುನ್ನಾ , ಮಹೇಶ್ ,ಗಣೇಶ ಭಾಗವಹಿಸಿದ್ದರು.
Back to top button
error: Content is protected !!