ಸುದ್ದಿಗೋಷ್ಠಿ

ನ.11 ರಂದು ಕುಶಾಲನಗರದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ

ಕುಶಾಲನಗರ,‌ನ 08: ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿವಿಧ ಸಂಘ ಸಂಸ್ಥೆಗಳು, ಕನ್ನಡ ಅಭಿಮಾನಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ನಾಗರಿಕರ ಸಹಭಾಗಿತ್ವದಲ್ಲಿ ಹಾಗೂ 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 11 ರಂದು ಕುಶಾಲನಗರದಲ್ಲಿ ಬೆಳಗ್ಗೆ 10.30 ಕ್ಕೆ 5 ಸಾವಿರ ಮಂದಿಯಿಂದ ಕನ್ನಡ ಕಂಠ ಗಾಯನ ವಿನೂತನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,
ಪಟ್ಟಣದ ರಥ ಬೀದಿ ಹಾಗೂ ಐಬಿ ರಸ್ತೆಯಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ನಾಡಗೀತೆ, ರೈತಗೀತೆ ಮತ್ತು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಗೀತಾ ಗಾಯನ ನಡೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮ ಧ್ವಜಾರೋಹಣವನ್ನು ಉಸ್ತುವಾರಿ ಸಚಿವ ಬೋಸ್ ರಾಜ್ ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ನಾಗೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ,ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟರಾಜು,ಎಸ್ಪಿ ಕೆ.ರಾಮರಾಜನ್,‌ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಡಿಡಿಪಿಐ ರಂಗಧಾಮಪ್ಪ,ಡಿಡಿಪಿಯು ಮಂಜುಳಾ,ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕುಶಾಲನಗರ ತಾಲ್ಲೂಕು ತಹಶೀಲ್ದಾರರಾದ ಕಿರಣ್ ಗೌರಯ್ಯ, ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪುರಸಭೆ ಮುಖ್ಯನಿರ್ವಾಹಣಾಧಿಕಾರಿ ಕೃಷ್ಣಪ್ರಸಾದ್, ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ರೇವತಿ ರಮೇಶ್, ಜಿಲ್ಲಾ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ತಾಲ್ಲೂಕು ಗೌರವ ಕಾರ್ಯದರ್ಶಿ ಎಸ್.ನಾಗರಾಜು, ಟಿ.ವಿ.ಶೈಲಾ, ತಾಲ್ಲೂಕು ಕೋಶಾಧಿಕಾರಿ ಕೆ.ವಿ.ಉಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದರೊಂದಿಗೆ
ಡಿ.20 ರಿಂದ ಮೂರು ದಿನಗಳ ಕಾಲ ಮಂಡ್ಯ ನಗರದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕೊಡಗು ಜಿಲ್ಲೆಗೆ ಆಗಮಿಸುವ ಕನ್ನಡ ಜ್ಯೋತಿ ರಥದ ಅದ್ದೂರಿ ಮೆರವಣಿಗೆಯನ್ನು ಬೆಳಗ್ಗೆ 10.30 ಗಂಟೆಗೆ ಬೈಚನಹಳ್ಳಿ ಮಾರಿಯಮ್ಮನ ದೇವಾಲಯದಿಂದ ರಥದ ಬೀದಿಯವರೆಗೆ ಆಯೋಜಿಸಲಾಗಿದೆ.
ವಿವಿಧ ಸಂಘಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು, ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಖಾಸಗಿ ಬಸ್ ನಿಲ್ದಾಣದಲ್ಲಿ ವಾಹನ ಪಾರ್ಕಿಂಗ್, ಕನ್ನಿಕಾ ಇಂಟರ್ನ್ಯಾಷನಲ್ ಹಾಗೂ ಕಾರು ನಿಲ್ದಾಣದಲ್ಲಿ ಊಟದ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ದೇವಿಪ್ರಸಾದ್,ನಿರ್ದೇಶಕರಾದ ಹರೀಶ್ ಗುಡ್ಡೆಮನೆ,ಕೆ.ಬಿ.ಶ್ರೀನಿವಾಸ್,ಪರಮೇಶ್,‌ಖಜಾಂಜಿ ಉಮೇಶ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!