ಸಭೆ

ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ

ಕುಶಾಲನಗರ, ನ 09: ಕುಶಾಲನಗರ ತಾಲೂಕು ಆಡಳಿತದಿಂದ ನ.18 ರಂದು ಕನಕ‌ ಜಯಂತಿ ಆಚರಣೆ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ತಹಸೀಲ್ದಾರ್ ಕಿರಣ್ ಗೌರಯ್ಯ ಅಧ್ಯಕ್ಷತೆಯಲ್ಲಿ ಕನಕ‌ಜಯಂತಿ ಆಚರಣೆ ಸಂಬಂಧ ಸಲಹೆ ಸೂಚನೆ ಪಡೆದು ಚರ್ಚಿಸಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕನಕದಾಸರು ಒಂದು‌ ಸಮಾಜಕ್ಕೆ ಸೀಮಿತವಾದವರಲ್ಲ. ತಾಲೂಕಿನ ಎಲ್ಲಾ ಅಧಿಕಾರಿ ವರ್ಗದವರು, ಸಂಘಸಂಸ್ಥೆಯ ಪದಾಧಿಕಾರಿಗಳು ಸೇರಿ ಈ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಡಿ.ಆರ್.ಪ್ರಭಾಕರ್ ಮಾತನಾಡಿ, ಕನಕ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಬೇಕಿದೆ. ಕಾರ್ಯಕ್ರಮದಲ್ಲಿ ಪ್ರತಿಭಾವಂತ ಗಿರಿಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಬೇಕಿದೆ. ಸಮಾಜಕ್ಕಾಗಿ ದುಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಬೇಕಿದೆ. ಪ್ರತಿ ವರ್ಷದಂತೆ ಕುರುಬ ಸಮಾಜದ ಮಕ್ಕಳನ್ನು ಕೂಡ ಸನ್ಮಾನಿಸಿ ಪ್ರೋತ್ಸಾಹಿಸುವಂತಾಗಬೇಕಿದೆ ಎಂದು ಆಗ್ರಹಿಸಿದರು.
ಕುರುಬ ಸಂಘದ ಸಂಘಟನಾ ಕಾರ್ಯದರ್ಶಿ ಪ್ರಸನ್ನ ಮಾತನಾಡಿ, ನಮ್ಮ ಸಮಾಜದ ಎಲ್ಲರಿಗೂ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಒಗ್ಗೂಡಿಸುವ ಕೆಲಸ ಆಗಬೇಕಿದೆ ಎಂದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಸ್ವಾಮಿ ಮಾತನಾಡಿದರು.
ಕುಶಾಲನಗರ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ರಾಜ್ಯ ಕುರುಬ ಸಂಘದ ಕೊಡಗು ಜಿಲ್ಲಾ ನಿರ್ದೇಶಕಿ ಹೇಮಲತಾ ಮಂಜುನಾಥ್, ಕುರುಬ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣ, ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಭರಮಣ್ಣ ಬೆಟಗೇರಿ, ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ಮಂಜುನಾಥ್, ಪ್ರಮುಖರಾದ ವಸಂತ, ಶಿವಣ್ಣ, ರವಿ ತೊರೆನೂರು, ಸುರೇಶ್, ರಮೇಶ್, ದೊಡ್ಡೇಗೌಡ, ಲೋಕೇಶ್, ಡಿಎಸ್ ಎಸ್ ಸಂಚಾಲಕ ರಾಜು ಮತ್ತಿತರರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!