ಕುಶಾಲನಗರ, ಜು 20: ಮಳೆಯಿಂದ ಕುಸಿದು ಬಿದ್ದ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ಪಾರ್ವತಿ ಎಂಬುವರ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲ ಹಂತ ಪರಿಹಾರವಾಗಿ ರೂ 95 ಸಾವಿರದ ಚೆಕ್ ಜೊತೆಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಿದರು.
ಮುಂದಿನ ದಿನಗಳಲ್ಲಿ ಮನೆ ಕೆಲಸವನ್ನು ಅರಂಭ ಮಾಡಿದ ನಂತರ ಅಧಿಕಾರಿ ವರ್ಗದವರು ಪರಿಶೀಲನೆ ನಡೆಸಿ ಹಂತ ಹಂತವಾಗಿ ಉಳಿದ 4 ಲಕ್ಷ ರೂಗಳನ್ನು ಬಿಡುಗಡೆಗೊಳಿಸುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಕುಶಾಲನಗರ ನಗರ ಬಿ ಜೆ ಪಿ ಅಧ್ಯಕ್ಷ ಉಮಾಶಂಕರ್, ಗ್ರಾಪಂ ಸದಸ್ಯ ದಿನೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಗಣೇಶ್, ಕುಮಾರ ಸ್ವಾಮಿ, ರವಿಕುಮಾರ್, ಸಹಕಾರ ಸಂಘದ ಮಾಜಿ ನಿರ್ದೇಶಕ ಮಂಜಯ್ಯ, ಕಂದಾಯ ಪರಿವೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!