ಕುಶಾಲನಗರ, ಜು 20:
ಕುಶಾಲನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಯುವಜನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಯುಜನ ಸಂಘದ 55ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ನೆರವೇರಿಸಿದರು. ಶಾಲಾ ಆವರಣದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಹಸಿರಿದ್ದರೆ ಮಾತ್ರ ಉಸಿರು. ಪ್ರತಿಯೊಬ್ಬರು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಸಂಘದ ಅಧ್ಯಕ್ಷರಾದ ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಎಂ.ಎಂ.ಚರಣ್, ಸದಸ್ಯ ಪುಂಡರಿಕಾಕ್ಷ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ, ಮುಳ್ಳುಸೋಗೆ ಗ್ರಾಪಂ ಅಧ್ಯಕ್ಷ ಚೆಲುವರಾಜು, ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಯುವಜನ ಸಂಘದ ಪ್ರಮುಖರಾದ ವೈಶಾಖ್, ಅಂಜನ್, ಕಾರ್ತಿಕ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಇದ್ದರು.
Back to top button
error: Content is protected !!