ಕುಶಾಲನಗರ, ನ . 14: ನಂಜರಾಯಪಟ್ಟಣ ಗ್ರಾಮ ಪಂಚಾಯತಿಯ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಕೆ(ಕಾರ್ಮಿಕ ಆಯವ್ಯಯ)ಯ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಕೆ, ಅನುಮೋದನೆ ಸಂಬಂಧ ಚರ್ಚಿಸಿದರು.
ಅಧ್ಯಕ್ಷತ ವಹಿಸಿದ ಗ್ರಾಪಂ ಅಧ್ಯಕ್ಷ ಸಿ.ಎಲ್. ವಿಶ್ವ ಮಾತನಾಡಿ, ಗ್ರಾಮಸ್ಥರ ಮನವಿಯ ಮೇರೆಗೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಈ ಮೂಲಕ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕಾರಣಿಭೂತರಾಗಬೇಕು ಎಂದರು.
ಸಭೆಗೆ ನೋಡಲ್ ಅಧಿಕಾರಿಯಾಗಿ ಕೂಡಿಗೆ ಕೃಷಿ ಕ್ಷೇತ್ರದ ಅಧಿಕಾರಿ ಎ. ಸ್ವರ್ಣ ಭಾಗವಹಿಸಿದ್ದ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಲೋಕನಾಥ್, ಆರ್.ಕೆ.ಚಂದ್ರು, ಜಾಜಿ, ಗಿರಿಜಾ, ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಕಾರ್ಯದರ್ಶಿ ಶೇಷಗಿರಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!