ಕುಶಾಲನಗರ, ನ 15: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮ ನಿವಾಸಿಯಾದ ದೇವರಾಜು ಎಂಬುವವರು ದಿನಾಂಕ: 03-11-2024 ರಂದು ದೀಪವಾಳಿ ಹಬ್ಬದ ಪ್ರಯುಕ್ತ ಸಂಬಂಧಿಕರ ಮನೆಗೆ ತೆರಳಿದ್ದು, ಮರಳಿ ಮನೆಗೆ ಬಂದು ನೋಡಿದಾಗ ಅಪರಿಚಿತ ವ್ಯಕ್ತಿಗಳು ಮನೆಯ ಹಿಂದಿನ ಬಾಗಿಲನ್ನು ಮುರಿದು ಲಾಕರ್ನಲ್ಲಿದ್ದ ಅಂದಾಜು ಸುಮಾರು 219 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ
ಸದರಿ ಪ್ರಕರಣದ ಘಟನೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷಾಧಾರಗಳನ್ನು ಕಲೆಹಾಕಿ ಆರೋಪಿಯನ್ನು ಪತ್ತೆ ಹಚ್ಚಲು ಆರ್.ವಿ ಗಂಗಾಧರಪ್ಪ, ಡಿವೈಎಸ್ಪಿ, ಸೋಮವಾರಪೇಟೆ ಉಪವಿಭಾಗ, ರಾಜೇಶ್.ಕೆ. ಸಿಪಿಐ, ಕುಶಾಲನಗರ ವೃತ್ತ, ಶ ಮೋಹನ್ ರಾಜು, ಪಿಎಸ್ಐ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ & ಠಾಣಾ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 13-11-2024 ರಂದು ಹಕ್ಕೆ ಗ್ರಾಮ ನಿವಾಸಿಯಾದ ಸೋಮಶೇಖರ್.ಎಸ್.ಕೆ. (24 ವರ್ಷ) ಹಾಗೂ ಹೊಳೆನರಸಿಪುರ ತಾ। ಮಾಚಗೌಡನಹಳ್ಳಿ ಗ್ರಾಮ ನಿವಾಸಿಯಾದ ಅಭೀಷೇಕ್.ಎನ್, (24 ವರ್ಷ) ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿರುತ್ತದೆ ಹಾಗೂ ಕಳವು ಮಾಡಿದ್ದ 168.02 ಗ್ರಾಂ ಚಿನ್ನಾಭರಣಗಳನ್ನು, ನಗದು ರೂ.2,54,000/-ಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ದ್ವಿ-ಚಕ್ರ ವಾಹನ & ಕಬ್ಬಿಣದ ಹಾರೆಯನ್ನು ವರಪಡಿಸಿಕೊಳ್ಳಲಾಗಿದೆ.
ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ. ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!