ಟ್ರೆಂಡಿಂಗ್

ನಂಜರಾಯಪಟ್ಟಣದಲ್ಲಿ ನಡೆದ ವಿಶ್ವ ಮಧುಮೇಹ ದಿನಾಚರಣೆ

ಕುಶಾಲನಗರ, ನ. 16 : ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಶಾಲನಗರ ತಾಲ್ಲೂಕು ಅರೋಗ್ಯಾಧಿಕಾರಿಗಳ ಕಛೇರಿ ಸಂಯುಕ್ತ ಆಶ್ರಯದಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎಲ್. ವಿಶ್ವ ನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್,
ತಾಲೂಕು ವೈದ್ಯಾಧಿಕಾರಿ ಡಾ.ಇಂದೂಧರ್ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ‌ ಮಾತನಾಡಿ, ಸಭೆಗೆ ಅಗತ್ಯ ಮಾಹಿತಿ ಒದಗಿಸಿದರು.
30 ವರ್ಷ ಮೇಲ್ಪಟ್ಟವರು ಕಾಲಕಾಲಕ್ಕೆ ಬಿಪಿ, ಶುಗರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಪಾರ್ಶ್ವವಾಯು, ಹೃದಯಾಘಾತ ಹಾಗೂ ಅಂಗ ವೈಫಲ್ಯಗಳಿಂದ ಜೀವಕ್ಕೆ ಅಪಾಯ ಉಂಟಾಗುತ್ತದೆ ಎಂದರು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಪದ್ದತಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಲೋಕನಾಥ್, ಆರ್.ಕೆ.ಚಂದ್ರು, ಜಾಜಿ, ಗಿರಿಜ, ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಸೇರಿದಂತೆ ಗ್ರಾಮ ಪಂಚಾಯತಿ ಆರೋಗ್ಯ ಪಡೆಯ ಸದಸ್ಯರು, ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಅಶಾ ಕಾರ್ಯಕರ್ತೆರು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!