ಕುಶಾಲನಗರ,ನ 16: ವಿಧ್ಯಾರ್ಥಿಗಳು ವಿಧ್ಯಾರ್ಥಿ ಜೀವನದಲ್ಲೇ ಜ್ಞಾನ ಭಂಡಾರ ಹೆಚ್ಚಿಸಿಕೊಂಡು ಉತ್ತಮ ಸಮಾಜ ಕಟ್ಟಬೇಕೆಂದು ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ನಾಗೇಶ್ ಕರೆ ನೀಡಿದರು.
ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನ ಕ್ರೀಡಾ ದಿನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ತಾವು ಓದುವ ವಿಧ್ಯಾ ಸಂಸ್ಥೆಯ ಘನತೆ ಹೆಚ್ಚಿಸುವ ರೀತಿಯಲ್ಲಿ ಓದುವ ಮೂಲಕ ರಾಜ್ಯ ಮಟ್ಟದಲ್ಲಿ ರಾಂಕ್ ಪಡೆಯಬೇಕು. ವಿಧ್ಯಾ ಸಂಸ್ಥೆಗಳಲ್ಲಿ ಇಂತಹ ಕ್ರೀಡಾಕೂಟ ನಡೆಸುವುದರಿಂದ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳ ಜೀವನಕ್ಕೆ ಇದು ಅತ್ಯಂತ ಸ್ಪೂರ್ತಿಯಾಗಲಿದೆ ಎಂದು ತಿಳಿಸಿದರು.
ವಿವೇಕಾನಂದ ವಿಧ್ಯಾ ಸಂಸ್ಥೆಯ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಮಾತನಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಪ್ರತಿ ವರ್ಷ ಇಂತಹ ಕ್ರೀಡಾಕೂಟ ಆಯೋಜಿಸಲಾಗುತ್ತದೆ.
ಸಂಸ್ಥೆಯ ಪಿಯು ವಿಭಾಗದ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಡಿಗ್ರಿ ಕಾಲೇಜಿನ ಪ್ರಾಂಶುಪಾಲೆ ಲಿಪಿಕಾ, ಸಂಸ್ಥೆಯ ಖಜಾಂಚಿ ನಂಜಪ್ಪ, ಆಡಳಿತಾಧಿಕಾರಿ ಮಹೇಶ್ ಅಮೀನ್ ಇತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಕಳೆದ 2 ದಿನದಿಂದ ನಡೆದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Back to top button
error: Content is protected !!