ಕುಶಾಲನಗರ, ನ 21: ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಪರ್ಯಾಲೋಚನಾ ಸಭೆ ಉಪವಿಭಾಗಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು
ಗ್ರಾಮ ಪಂಚಾಯತ್ ಸದಸ್ಯರು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಉಪ ವಿಭಾಗ ಅಧಿಕಾರಿಗಳಿಗೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಕರೆಯಲಾಗಿ ಅವಿಶ್ವಾಸ ಗೊತ್ತುವಳಿ, ಮಂಡನೆಗೆ ಮತಕ್ಕೆ ಹಾಕಲಾಯಿತು. ಅವಿಶ್ವಾಸದ ಪರವಾಗಿ 15 ಮಂದಿ ಸದಸ್ಯರು ಮತ ಚಲಾಯಿಸಿದರೆ ಅವಿಶ್ವಾಸದ ವಿರುದ್ಧವಾಗಿ ಮೂರು ಮಂದಿ ತಮ್ಮ ಮತವನ್ನು ಚಲಾಯಿಸಿದರು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮ 1994 ನಿಯಮ 9ರ ಮೇರೆಗೆ 2/3 ರಷ್ಟು ಮಂದಿ ಅವಿಶ್ವಾಸ ಮಂಡನೆಯ ಪರವಾಗಿ ಮತ ಚಲಾಯಿಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದನ್ನು ತಕ್ಷಣದಿಂದ ನಿಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಯವರು ಸೂಚಿಸಿದರು.
Back to top button
error: Content is protected !!