ಕುಶಾಲನಗರ, ನ 29:ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕಾರ್ಮಾಡು ಗ್ರಾಮದ ವಿ.ಬಿ.ಮುತ್ತಣ್ಣ @ ಜೀಪು ರಮೇಶ ಎಂಬುವವರ ಮನೆಯ ಕಾಂಪೌಡ್ ಒಳಗೆ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಕಾರ್ಮಾಡು ಗ್ರಾಮದ ಮುಕ್ಕಾಟಿಕೊಪ್ಪಲು ನಿವಾಸಿಯಾದ ವಿ.ಬಿ.ಮುತ್ತಣ್ಣ ಜೀಪು ರಮೇಶ, (68 ವರ್ಷ) ಎಂಬಾತನನ್ನು ನಿಷೇಧಿತ ಮಾದಕ ವಸ್ತು 5 ಕೆ.ಜಿ 500 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Back to top button
error: Content is protected !!