ಕುಶಾಲನಗರ, ಡಿ 30: ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನೆರವೇರಿತು.
ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ವೈಕುಂಠ ದ್ವಾರಗಳ ಮೂಲಕ ಸಾಗಿಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅರ್ಚಕರಾದ ಗಿರೀಶ್ ಭಟ್, ಯೋಗೇಶ್ ಭಟ್ ಪೂಜಾ ವಿಧಿ ನೆರವೇರಿಸಿದರು.
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮತ್ತು ಕಾಂಗ್ರೆಸ್ ಮುಖಂಡರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭ ಮಾತನಾಡಿದ
ಟ್ರಸ್ಟ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಎಲ್ಲೆಡೆ ಶ್ರೀನಿವಾಸನ ದೇವಾಲಯದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಇಂದು ದೇವರ ದರ್ಶನ ಪಡೆದರೆ ಪುಣ್ಯ ಪ್ರಾಪ್ತಿಯಾಗುವ ಪ್ರತೀತಿಯಿದೆ ಎಂದು ತಿಳಿಸಿದರು.
ಈ ಸಂದರ್ಭ
ಆರ್ಯವೈಶ್ಯ ಮಂಡಳಿ ಉಪಾಧ್ಯಕ್ಷರಾದ ಬಿ.ಎಲ್. ಅಶೋಕ್ ಕುಮಾರ್, ಕಾರ್ಯದರ್ಶಿ ಕೆ.ಪ್ರವೀಣ್, ಖಜಾಂಚಿ ಪಿ.ಎಸ್. ಪ್ರಶಾಂತ್, ನಿರ್ದೇಶಕರಾದ ಕೆ.ಜೆ. ಸತೀಶ್ ಬಿ. ಆರ್. ನಟರಾಜ, ವೈಶಾಖ್, ಪ್ರಮುಖರಾದ ವಿ.ಎನ್.ವಸಂತಕುಮಾರ್ ಇದ್ದರು.
Back to top button
error: Content is protected !!