ಕುಶಾಲನಗರ, ಜು 21: ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಲ ಜೀವನ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ರಾಜ್ಯ ಮಟ್ಟದ ಜಲ ಜೀವನ್ ಯೋಜನೆ ಗುಣಮಟ್ಟ ಪರೀಕ್ಷಣಾಧಿಕಾರಿ ಸಂಬಾಜಿ ಅಟ್ಟರ್ವಾಲ ಪರಿಶೀಲಿಸಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೂಡುಮಂಗಳೂರು ಮತ್ತು ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮತ್ತು ಅದರ ಗುಣಮಟ್ಟವನ್ನು ಪರೀಕ್ಷಿಸಿದರು.
ನಂತರ ಕೂಡಿಗೆ ಗ್ರಾಮ ಪಂಚಾಯತಿ ಕಛೇರಿಗೆ ಭೇಟಿ ನೀಡಿ ಕುಡಿಯುವ ನೀರಿನ ಯೋಜನೆಯ ಪತ್ರಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭ ತಾಲ್ಲೂಕು ಕುಡಿಯುವ ನೀರಿನ ಸರಬರಾಜು ಸಹಾಯಕ ಕಾರ್ಯಪಾಲಕ ಅಭಿಯಂತರ ವೀರೇಂದ್ರ ಕುಮಾರ್, ಸಹಾಯಕ ಇಂಜಿನಿಯರ್ ಕೀರ್ತನ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಕೆ.ಅಯಿಷಾ, ಸಂತೋಷ್, ಕಾರ್ಯದರ್ಶಿ ಪುನೀತ್ ಸೇರಿದಂತೆ ಗುತ್ತಿಗೆದಾರರು ಹಾಜರಿದ್ದರು.
Back to top button
error: Content is protected !!