ಕುಶಾಲನಗರ, ಜು 21: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗು ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ” ಶರಣ ಸಂಸ್ಕ್ರತಿ ” ವಿಚಾರದ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶರಣರ ವಚನಗಳ ಸಾರ ಅರಿತು ಬಾಳ್ವೆ ನಡೆಸಿದರೆ ಜೀವನ ಹಸನಾಗುತ್ತದೆ. ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ವಚನಗಳು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಕೂಡ ಈ ಜೀವನ ಮೌಲ್ಯಗಳ ಬಗ್ಗೆ ಗಮನ ಹರಿಸಬೇಕಿದೆ ಎಂದರು. ಭಾರತವನ್ನು ವಿಶ್ವಗುರುವಾಗಿಸುವಲ್ಲಿ ಪ್ರತಿಯೊಬ್ಬರು ಪ್ರಯತ್ನಿಸಬೇಕಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯ ಮಹತ್ತರ ಕೊಡುಗೆ ನೀಡಿದೆ. ವಚನಕಾರರು ಅಚ್ಚ ಕನ್ನಡದ ಬೇಸಾಯಗಾರರು, ವಚನ ಸಾಹಿತ್ಯ ಎಂಬುದು ಜನಸಾಮಾನ್ಯರ ಭಾಷೆಯಾಗಿದೆ.
ಪ್ರಜಾಪ್ರಭುತ್ವದ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಶರಣರು ಕನ್ನಡದಲ್ಲಿ ಅರಿವು ಮೂಡಿಸಿದರು. ಇಂತಹ ಮೌಲ್ಯಗಳನ್ನು, ಕನ್ನಡ ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಸಾಹಿತ್ಯ ಪರಿಷತ್ ಮುಂದಾಗಿದೆ ಎಂದರು.
ಪರಿಷತ್ತಿನ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಬ್ಬಾಲೆ ವಿದ್ಯಾಸಂಸ್ಥೆಯ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ ಶರಣ ಸಂಸ್ಕ್ರತಿ ಕುರಿತು ಉಪನ್ಯಾಸ ನೀಡಿದರು.
ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಆರ್.ಪ್ರತಿಭಾ, ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಸದಾಶಿವಯ್ಯ ಪಲ್ಲೇದ್, ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಲೇಖನಾ ಧರ್ಮೇಂದ್ರ, ಎಂಜಿಎಂ ಕಾಲೇಜು ಪ್ರಾಂಶುಪಾಲರಾದ ಲಿಖಿತ, ವಿವೇಕಾನಂದ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಶ್ಮಾ, ಕುಶಾಲನಗರ ಕಸಾಪ ಗೌರವ ಕಾರ್ಯದರ್ಶಿ ಎಸ್.ನಾಗರಾಜು, ಮಂಜು ಭಾರ್ಗವಿ, ಪ್ರಮುಖರಾದ ನಾಗರಾಜು, ಉಮೇಶ್, ವಿವಿಧ ಘಟಕಗಳ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Back to top button
error: Content is protected !!