ಧಾರ್ಮಿಕ

ಬ್ಯಾಡಗೊಟ್ಟದ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮುನೇಶ್ವರ ಮತ್ತು ಚೌಡೇಶ್ವರಿ ದೇವಿ ಪೂಜೋತ್ಸವ

ಕುಶಾಲನಗರ, ನ 22: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಮುನೇಶ್ವರ ಮತ್ತು ಚೌಡೇಶ್ವರಿ ದೇವಿಯ ಪೂಜೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪೂಜೋತ್ಸವದಲ್ಲಿ ಪಾಲ್ಗೊಂಡಿದ್ದರು.
ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಕಳೆದ ಕೆಲವು ವರ್ಷಗಳಿಂದ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ನಡೆಯದೆ ಸ್ಥಗಿತಗೊಂಡಿತ್ತು. ಇದರಿಂದ ಈ ಭಾಗದಲ್ಲಿ ತೊಂದರೆಗಳು ಘಟಿಸುತ್ತಿವೆ ಎಂದು ಗ್ರಾಮದ ಯುವಕರು, ಪ್ರಮುಖರು ಸೇರಿ ಶಾಸಕ ನೇತೃತ್ವದಲ್ಲಿ ಹೋಮ ಹವನ ಸಿದ್ದಲಿಂಗಪುರದ ಅರಿಸಿನಗುಪ್ಪೆ ಮಂಜುನಾಥಸ್ವಾಮಿ ದೇವಾಲಯದ ರಾಜೇಶ್ ನಾಥ್ ಸ್ವಾಮೀಜಿ ಪೂಜೋತ್ಸವ ನೆರವೇರಿತು.
ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಜೈವರ್ಧನ್, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಜಿಲ್ಲಾ ಸಂಗೋಳಿರಾಯಣ್ಣ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರವೀಣ್, ಕುಶಾಲನಗರ ಕೂಡ ಅಧ್ಯಕ್ಷ ಚರಣ್, ನಿರ್ದೇಶಕರಾದ ವೈಶಾಕ್, ಪುಂಡರಿಕಾಕ್ಷ, ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್ ಮತ್ತಿತರರು ಪಾಲ್ಗೊಂಡಿದ್ದರು. ಮಹಾಮಂಗಳಾರತಿ ನಂತರ ಅನ್ನ ಸಂತರ್ಪಣೆ ಕಾರ್ಯ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!