ಕುಶಾಲನಗರ, ಡಿ 11: ಡಿ
8 ರಂದು ಕಾಣೆಯಾಗಿದ್ದ ಯುವತಿ ಮೃತದೇಹ ಪತ್ತೆ.
ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ.
ಡಿ.8 ರಿಂದ ನಾಪತ್ತೆಯಾಗಿರುವುದಾಗಿ ಕುಶಾಲನಗರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ ರಥಬೀದಿಯ ತಂದೆಯ ಫ್ಯಾನ್ಸಿ ಸ್ಟೋರ್ ನಲ್ಲಿ ನೆರವಾಗುತ್ತಿದ್ದಳು.
ಡಿ. 8 ರಂದು ಮೊಬೈಲ್ ವಿಚಾರವಾಗಿ ಭಾವನ ಹಾಗೂ ಆಕೆಯ ಸಹೋದರ ಮಹಿಪಾಲ್ ನಡುವೆ ಜಗಳವಾಗಿದೆ.
ಈ ಸಂದರ್ಭ ಭಾವನ ಅಂಗಡಿಯಿಂದ ಹೊರತೆರಳಿದ್ದು ಇದುವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಇಂದು ಯುವತಿ ಮೃತದೇಹ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದೊರೆತಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಗೊಂಡಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Back to top button
error: Content is protected !!