ಕುಶಾಲನಗರ, ಡಿ 12: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಸರಬರಾಜು ಮಾಡುತ್ತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ
ಬಂಧಿತರಿಂದ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
Back to top button
error: Content is protected !!