ಕುಶಾಲನಗರ, ಏ 03:: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ.
ಶರಣ್ಯ (36) ನಾಪತ್ತೆಯಾದ ಮಹಿಳೆಯಾಗಿದ್ದು, ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್ ಹೊರಟಿದ್ದರು ಎಂದು ಹೇಳಲಾಗಿದೆ.
ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಿ ಬಂದಿದ್ದ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ. ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಪತ್ತೆ ಕಾರ್ಯದಲ್ಲಿ ತೊಡಗಿದೆ.
Back to top button
error: Content is protected !!