ಕುಶಾಲನಗರ, ಡಿ 29: ಮಡಿಕೇರಿ ಹೋಬಳಿಯ ಎಸ್. ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಸದರಿ ಸ್ಥಳದಲ್ಲಿ ಪ್ರಸ್ತುತ ಉಂಟಾಗಿರುವ ಬೆಳವಣಿಗೆಗಳ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಲ್ಲೇಖ(2)ರ ಆರಕ್ಷಕ ಅಧೀಕ್ಷಕರ ಕೋರಿಕೆಯನ್ನು ಪರಿಗಣಿಸಿ ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ ಹೋಬಳಿಯ, ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 05 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ದಿನಾಂಕ 30.12.2024 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ದಿನಾಂಕ 02-01-2025 ರ ಬೆಳಿಗ್ಗೆ 06.00 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ಯಾಲಿ, ಜಾತಾ ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಉಪವಿಭಾಗಾಧಿಕಾರಿಗಳು ಘೋಷಿಸಿ ಆದೇಶಿಸಿದ್ದಾರೆ.
Back to top button
error: Content is protected !!