ಕುಶಾಲನಗರ, ಜ 08: ಕುಶಾಲನಗರದ ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನಡೆಯಿತು.
ಅನುಗ್ರಹ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಎಸ್.ಕೆ. ಸತೀಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು ಆತ್ಮವಿಶ್ವಾಸ ಬೆಳೆಸಿಕೊಂಡಾಗ ಮಾತ್ರ ಮುಂದೆ ಸಮಾಜದಲ್ಲಿ ಅತ್ತ್ಯುನ್ನತ ಹುದ್ದೆಯನ್ನು ಅಲಂಕರಿಸುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವ ಯಂತ್ರಗಳಾಗದೆ, ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕಾದ ಅಗತ್ಯವನ್ನು ನೀತಿ ಕಥೆಯ ಮೂಲಕ ಸಾದರ ಪಡಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ .ಎನ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯತೆಯನ್ನು ಬೆಳೆಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗಿ ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗುವುದಕ್ಕೆ ಸಾಧ್ಯ.ಶಿಕ್ಷಣವು ಅಂಕ ಆಧಾರಿತವಾಗುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಅನುಗ್ರಹ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಟ್ಟು ಪ್ರೋತ್ಸಾಹಿಸುವ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್.ಬಿ.ಲಿಂಗಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಂಡಾಗ ಮಾತ್ರ ವಿದ್ಯೆ ಸಾರ್ಥಕವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪಡುವ ಶ್ರಮ ಸಾಧನೆಗೆ ದಾರಿದೀಪವಾಗಿ ಮುಂದಿನ ಬದುಕನ್ನು ಸೋಪಾನಗೊಳಿಸುತ್ತದೆ ಎಂದರು.
ಇದೇ ಸಂದರ್ಭ
ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಪದವಿ ಕಾಲೇಜಿನ ಉಪಪ್ರಾಂಶುಪಾಲೆ ಹರ್ಷಿತ, ಪದವಿ ಪೂರ್ವ ವಿಭಾಗದ ಉಪಪ್ರಾಂಶುಪಾಲೆ ಶ್ವೇತ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಸೀಮಾ, ವಿದ್ಯಾರ್ಥಿ ಸಮಿತಿಯ ಸಂಚಾಲಕಿ ಸೌಮ್ಯ ಉಪಸ್ಥಿತರಿದ್ದರು. ಕಾಲೇಜಿನ ವಾರ್ಷಿಕ ವರದಿಯನ್ನು ಕನ್ನಡ ಉಪನ್ಯಾಸಕಿ ಪೃಥ್ವಿ ಮಂಡಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಪ್ರವೀಣ ಮತ್ತು ಅಭಿಶೇಕ್ ಓದಿದರು. ಶ್ರೀಮತಿ ಶ್ವೇತಾ ಸರ್ವರನ್ನು ಸ್ವಾಗತಿಸಿ, ರೇಷ್ಮ ವಂದಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ರಕ್ಷಾಪ್ರಿಯ ಕಾರ್ಯಕ್ರಮ ನಿರೂಪಿದರು.
Back to top button
error: Content is protected !!