ಟ್ರೆಂಡಿಂಗ್

ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಆಂದೋಲನ

ಕುಶಾಲನಗರ, ಜ 09: ಕುಶಾಲನಗರ ಸಮೀಪದ ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ಹೆದ್ದಾರಿ ಬದಿಯ ಸೂಚನಾ ಫಲಕಗಳನ್ನು ಸ್ವಚ್ಛ ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡರು.
ಕಳೆದ ಒಂದು ವಾರಗಳ ಕಾಲ ಹಲವು ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಶಿಬಿರಾರ್ಥಿಗಳು ಗುರುವಾರ ಕುಶಾಲನಗರದ ಬೈಚನಹಳ್ಳಿ ಮಾರಿಯಮ್ಮ ದೇವಾಲಯ ಬಳಿಯಿಂದ ಸ್ವಚ್ಛತಾ ಕಾರ್ಯ ಆರಂಭಿಸಿದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಸ್ತೆಯ ಎರಡು ಬದಿಗಳಲ್ಲಿ ಅಳವಡಿಸಿರುವ ರಸ್ತೆ ಸಂಚಾರಿ ನಿಯಮಗಳ ಫಲಕಗಳು, ಪಟ್ಟಣದ ಸಂಚಾರಿ ಪೊಲೀಸ್ ಸಿಗ್ನಲ್ ಕೇಂದ್ರಗಳನ್ನು ಸ್ವಚ್ಛಗೊಳಿಸಿದ ಶಿಬಿರಾರ್ಥಿಗಳು ಬೈಲುಕುಪ್ಪೆ ತನಕ ಹೆದ್ದಾರಿಯಲ್ಲಿ ಸ್ವಚ್ಛತಾ ಕಾರ್ಯ ಮುಂದುವರಿಸಿದರು.
ಈ ಸಂದರ್ಭ ಮಾತನಾಡಿದ ಎನ್ ಎಸ್ ಎಸ್ ಅಧಿಕಾರಿ ಹೆಚ್.ಆರ್. ದಿನೇಶ್, ಒಂದು ವಾರಗಳ ಕಾಲ ನಡೆಯುವ ಶಿಬಿರದಲ್ಲಿ ಶ್ರಮದಾನ, ಸಾಂಸ್ಕೃತಿಕ ಸ್ಪರ್ಧೆಗಳ ಸಿದ್ಧತೆ, ಕ್ರೀಡಾ ಚಟುವಟಿಕೆ ಉಪನ್ಯಾಸ ಕಾರ್ಯಕ್ರಮಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿವೆ.
ಕುಶಾಲನಗರದಿಂದ ಬೈಲುಕೊಪ್ಪೆ ತನಕ ಹೆದ್ದಾರಿ ಬದಿಗಳ 150ಕ್ಕೂ ಅಧಿಕ ಸೂಚನಾ ಫಲಕಗಳ ಸ್ವಚ್ಛತಾ ಕಾರ್ಯದಲ್ಲಿ ಶಿಬಿರಾರ್ಥಿಗಳು ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಫಾ. ಎಬಿನ್, ಆಡಳಿತ ಅಧಿಕಾರಿ ಫಾ .ಟಿಟೋ ಮತ್ತು ಎನ್ ಎಸ್ ಎಸ್ ಅಧಿಕಾರಿ ಹೆಚ್ ಆರ್ ದಿನೇಶ್ ಅವರ ನೇತೃತ್ವದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಎನ್ ಎಸ್ ಎಸ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಶಿಬಿರದ ನಿರ್ವಾಹಕರಾದ ಬೃಂದಾ, ಲೀನಾ,ಉಪನ್ಯಾಸಕ ಕೀರ್ತನ್ ಕುಟ್ಟಪ್ಪ, ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ಎಎಸ್ಐ ಶಿವಪ್ಪ, ಧನು ಕುಮಾರ್
ಹಾಗೂ ಸಂಚಾರಿ ಪೊಲೀಸರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!