ಕ್ರೈಂ

ಕುಶಾಲನಗರದ ಬಸವನತ್ತೂರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ

ಕುಶಾಲನಗರ, ಜ‌ 11:ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ದಿನಾಂಕ: 11-01-2025 ರಂದು ಬಸವನತ್ತೂರು ಗ್ರಾಮದ ಸರ್ಕಾರಿ ಶಾಲೆಯ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, 24 ವರ್ಷ ಮತ್ತು ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್, 20 ವರ್ಷ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ 80 ಗ್ರಾಂ ಗಾಂಜಾ & ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!