ಅಪಘಾತ

ನಿಲ್ಲಿಸಿದ್ದ ಆಟೋಗೆ ಹಿಂಬದಿಯಿಂದ ಡಿಕ್ಕಿ: ಕಾರು ಚಾಲಕನ ವಿರುದ್ದ ಪ್ರಕರಣ ದಾಖಲು

ಕುಶಾಲನಗರ, ಜ 11: ದಿನಾಂಕ: 10-01-2025 ರಂದು ಸಮಯ ಸುಮಾರು 05.35 ಗಂಟೆಗೆ ಕೂಡಿಗೆಯಿಂದ ಕುಶಾಲನಗರದ ಕಡೆಗೆ ಹೋಗುವ ರಸ್ತೆಯಲ್ಲಿ ಕೆಎ-09 ಎಂಕೆ 2864 ನೊಂದಣಿ ಸಂಖ್ಯೆಯ ಹುಂಡೈ ಕ್ರೇಟಾ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದಂತಹ ಕಾರು ಸನಾ ಎಕ್ಷರೆ ಸೆಂಟರ್‌ನ ಮುಂದೆ ರಸ್ತೆಯ ಎಡ ಬದಿಯಲ್ಲಿ ನಿಂತಿದ್ದ ಒಂದು ಆಟೋ ರಿಕ್ಷಾಗೆ ಡಿಕ್ಕಿ ಪಡಿಸಿದ್ದು, ಸ್ಥಳೀಯರು ಸದರಿ ವಾಹನವನ್ನು ತಡೆದು ನಿಲ್ಲಿಸಿರುತ್ತಾರೆ. ಸದರಿ ವಾಹನದ ಚಾಲಕನು ಪಿರಿಯಾಪಟ್ಟಣ್ಣ ತಾಲ್ಲೂಕಿನ ತಿರುಮಲಾಪುರ ಗ್ರಾಮ ನಿವಾಸಿ ಆನಂದ ಎಂದು ತಿಳಿದುಬಂದಿರುತ್ತದೆ ಹಾಗೂ ಸದರಿ ವಾಹನ ಚಾಲಕನು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದು ಹಾಗೂ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುತ್ತದೆ ಮತ್ತು ಸದರಿ ಆಟೋ ಚಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ.

ಅಪಘಾತದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮದ್ಯಪಾನ ಮಾಡಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಗೆ ಅಪಘಾತ ಪಡಿಸಿರುವ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 281, 110, 352 ಬಿಎನ್ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ದಿನಾಂಕ : 11-01-2025 ರಂದು ಆರೋಪಿಯಾದ ಪಿರಿಯಾಪಟ್ಟಣ ತಾಲ್ಲೂಕಿನ ತಿರುಮಲಾಪುರ ಗ್ರಾಮ ನಿವಾಸಿ ಆನಂದ, (40 ವರ್ಷ) ಎಂಬಾತನನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿ & ಸಿಬ್ಬಂದಿಗಳನ್ನು ಶ್ರೀ ಕೆ.ರಾಮರಾಜನ್, ಐಪಿಎಸ್. ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!