ಪ್ರಕಟಣೆ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ವತಿಯಿಂದ ಆನ್ಲೈನ್ ಜಾನಪದ ಗೀತೆ ಸ್ಪರ್ಧೆ

ಕುಶಾಲನಗರ, ಜ 28:ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕುಶಾಲನಗರ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ಜಾನಪದ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯು ಕುಶಾಲನಗರ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು ಚೈತನ್ಯ ಸಿ ಮೋಹನ್ ಅವರ ವಾಟ್ಸಾಪ್ ಸಂಖ್ಯೆ 6366307258ಗೆ ದಿನಾಂಕ 05/02/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಡಿಜಿಟಲ್ ಅಭಿನಂದನಾಪತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷರಾದ ಚೈತನ್ಯ ಸಿ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!