ಕುಶಾಲನಗರ, ಜ 22: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಪ್ರೋಸ್ಕೊಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಮೃತಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಆರೋಗ್ಯ ಇಲಾಖೆ ರಾಜ್ಯ ನಿರ್ದೇಶಕರಾದ ಡಾ.ತ್ರಿವೇಣಿ, ಉಪ ನಿರ್ದೇಶಕಿ ಡಾ.ಚಂದ್ರಿಕಾ ಅವರು ಸಭೆ ನಡೆಸಿ ಅಗತ್ಯ ಮಾಹಿತಿ ಕಲೆಹಾಕಿದರು.
ಈ ಸಂದರ್ಭ ಮಾತನಾಡಿದ ಡಾ.ತ್ರಿವೇಣಿ ಅವರು, ಮಹಿಳೆ ಸಾವು ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ವೈದ್ಯರು ಅತ್ಯಂತ ಅನುಭವಿಯಾದರೂ ಯಾಕೆ ಈ ಘಟನೆ ಸಂಭವಿಸಿದೆ ಎಂದು ತನಿಖೆ ಕೈಗೊಳ್ಳಲಾಗಿದೆ. ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ ಸರಕಾರಕ್ಕೆ ವರದಿ ಸಲ್ಲಿಸಿ,ಮುಂದೆ ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರವಹಿಸಲಾಗುವುದು. ಇದರಲ್ಲಿ ವೈದ್ಯರ ಲೋಪ ಕಂಡುಬಂದಲ್ಲಿ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದರು.
ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆನಂದ್, ಕುಶಾಲನಗರ ಸಿ ಹೆಚ್ ಸಿ ವೈದ್ಯಾಧಿಕಾರಿ ಡಾ.ಮಧುಸೂದನ್ ಹಾಗೂ ವೈದ್ಯವೃಂದ, ಸಿಬ್ಬಂದಿಗಳು ಇದ್ದರು.
Back to top button
error: Content is protected !!