ಕುಶಾಲನಗರ, ಡಿ 24: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಕಾಫಿ ಮತ್ತು ಕಾಳು ಮೆಣಸು ಬೆಳೆಗಾರರು ಕಾಫಿ & ಕಾಳು ಮೆಣಸು ಫಸಲನ್ನು ಕೊಯ್ಲು ಮಾಡುವ ಕಾಲವಾಗಿರುತ್ತದೆ. ಕೊಯ್ಲು ಮಾಡಿರುವ ಕಾಫಿ ಮತ್ತು ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಹಾಗೂ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರು ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿರುತ್ತದೆ.
ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭದಲ್ಲಿ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿ (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಹಿವಾಟಿನ ವಿವರ ತೂಕ & ಮೊತ್ತ) ಯನ್ನು ಸಂಗ್ರಹಿಸಿ ಇಟ್ಟುಕೊಳ್ಳುವುದು ಮತ್ತು ಬೆಳೆ ಖರೀದಿ ಸಂದರ್ಭಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದುಕೊಳ್ಳುವುದು ಹಾಗೂ ಸದರಿ ಮಾರಾಟದಾರರ ಕುರಿತು ಹಿನ್ನೆಲೆಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹರಿಸುವುದು.
ಕಾಫಿ ವ್ಯಾಪರಸ್ಥರು ಮೇಲ್ಕಂಡ ವಿವರಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಹಾಗೂ ಮಾರಾಟ/ಖರೀದಿ ಸಂದರ್ಭ ಯಾವುದೇ ರೀತಿಯ ಅನುಮಾನ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು. ಒಂದು ವೇಳೆ ಮೇಲ್ಕಂಡ ವಿವರಗಳ ದಾಖಲಾತಿಗಳನ್ನು ನಿರ್ವಹಿಸದಿರುವುದು ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ವ್ಯಾಪರಸ್ಥರ ಪರಿಶೀಲನೆ ಸಂದರ್ಭ ಕಂಡುಬಂದಲ್ಲಿ ಅಂತಹವರ ವಿರುದ್ಧ ಜಿಎಸ್‌ಟಿ ಇಲಾಖೆಗೆ ಮಾಹಿತಿ ನೀಡಲಾಗುವುದು ಹಾಗೂ ಯಾವುದೇ ದಾಖಲಾತಿ ನಿರ್ವಹಿಸದೇ ವ್ಯವಹರಿಸಿರುವುದನ್ನು ಉದ್ದೇಶಪೂರ್ವಕವಾಗಿ ಕಳವು ಮಾಲನ್ನು ಕಡಿಮೆ ಬೆಲೆಯಲ್ಲಿ ಪಡೆದಿರುವುದಾಗಿ ಪರಿಗಣಿಸಿ ವ್ಯಾಪರಸ್ಥರ ಮೇಲೆ Section: 317(2) & (4) BNS Act ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಸದರಿಯವರಿಗೆ ಘನ ನ್ಯಾಯಾಲಯವು 03 ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತವೆ.
Back to top button
error: Content is protected !!