ಕುಶಾಲನಗರ, ಜ.26: ನಾವು ಇಂದು
ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ,ರಾಷ್ಟ್ರಪ್ರೇಮ,
ಮತ್ತು ಏಕತೆಯಲ್ಲಿ ನಮ್ಮ ಪ್ರಯಾಣ ಮತ್ತು ಸಾಧನೆ ಬೇರೂರಿದೆ ಎಂದು 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ಪಾಲ್ಗೊಂಡಿದ್ದ ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆಯ ಅಧ್ಯಕ್ಷರೂ ಆದ ತಂಬಂಡ ತೇಜ ದಿನೇಶ್ ಭಾನುವಾರ ಕರೆ ನೀಡಿದರು.
ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕದ ವತಿಯಿಂದ ಭಾನುವಾರ ( ಜ.26 ರಂದು ) ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿ, ಸ್ವಾಭಿಮಾನಿ, ಗೌರವಯುತ ಜೀವನವನ್ನು ನಡೆಸಬೇಕು ಎಂದು ನಮ್ಮ ದೇಶದ ಅನೇಕ ಮಹನೀಯರು ಕಂಡಿದ್ದ ಕನಸನ್ನು ನನಸು ಮಾಡಲು ನಮ್ಮ ದೇಶದ ಸಂವಿಧಾನ ಸಹಕಾರಿಯಾಗಿದೆ ಎಂದರು.
ಶಾಲಾ- ಕಾಲೇಜು
ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ
ರಾಷ್ಟಪ್ರೇಮ ಬೆಳೆಸಿಕೊಳ್ಳಲು ದೇಶದ ಐಕ್ಯತೆ, ಸಮಗ್ರತೆಗೆ ಪಣ ತೊಡಬೇಕು ಎಂದು
ತೇಜ ದಿನೇಶ್ ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್,
ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನವು ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ.
ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ದಿನವು ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ ಎಂದು ಬಣ್ಣಿಸಿದರು.
ಧ್ವಜಾರೋಹಣ ನೆರವೇರಿಸಿದ ಶಾಲಾ ಎಸ್. ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ.ಜೆ.ರಜನಿಕಾಂತ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಎ.ಎಂ.ಜವರಯ್ಯ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕ ಎಂ.ಗೌತಮ್, ಉಪ ನಾಯಕಿ ಸ್ಪಂದನ, ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಇದಕ್ಕೂ ಮೊದಲು ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ದೈಹಿಕ ಕಸರತ್ತು , ವ್ಯಾಯಾಮ
ಪ್ರದರ್ಶನ ಹಾಗೂ
ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರತಿಬಿಂಬಿಸುವ ಪಿರಾಮಿಡ್ ರಚಿಸಿ ರಾಷ್ಟ್ರೀಯ ಧ್ವಜವನ್ನು ಎತ್ತಿ ಹಿಡಿದು ಗಮನ ಸೆಳೆದರು.
++++++++++++++++++++
ಚಿತ್ರ(೧): ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭವನ್ನು
ಕಾವೇರಿ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷೆ ತೇಜ ದಿನೇಶ್ ಉದ್ಘಾಟಿಸಿದರು.
ಎಸ್. ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್, ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್,
ಜವರಯ್ಯ, ಕೆ.ವಿ.ಅರುಣ್, ಗಣೇಶ್, ದಯಾನಂದ ಪ್ರಕಾಶ್, ಗೋಪಾಲ್, ಸೌಮ್ಯ ಇತರರು ಇದ್ದಾರೆ.
ಚಿತ್ರ(೨): ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ನಡೆದ 76 ನೇ ಗಣರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳು
ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರತಿಬಿಂಬಿಸುವ ಪಿರಾಮಿಡ್ ರಚಿಸಿ ರಾಷ್ಟ್ರೀಯ ಧ್ವಜವನ್ನು ಎತ್ತಿ ಹಿಡಿದು ಗಮನ ಸೆಳೆದರು.
ಶಾಲಾ- ಕಾಲೇಜು
ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ
ರಾಷ್ಟಪ್ರೇಮ ಬೆಳೆಸಿಕೊಳ್ಳಲು ದೇಶದ ಐಕ್ಯತೆ, ಸಮಗ್ರತೆಗೆ ಪಣ ತೊಡಬೇಕು ಎಂದು 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ಪಾಲ್ಗೊಂಡಿದ್ದ ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆಯ ಅಧ್ಯಕ್ಷರೂ ಆದ ತಂಬಂಡ
ತೇಜ ದಿನೇಶ್ ಭಾನುವಾರ ಕರೆ ನೀಡಿದರು.
ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕದ ವತಿಯಿಂದ ಭಾನುವಾರ ( ಜ.26 ರಂದು ) ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿ, ಸ್ವಾಭಿಮಾನಿ, ಗೌರವಯುತ ಜೀವನವನ್ನು ನಡೆಸಬೇಕು ಎಂದು ನಮ್ಮ ದೇಶದ ಅನೇಕ ಮಹನೀಯರು ಕಂಡಿದ್ದ ಕನಸನ್ನು ನನಸು ಮಾಡಲು ನಮ್ಮ ದೇಶದ ಸಂವಿಧಾನ ಸಹಕಾರಿಯಾಗಿದೆ ಎಂದರು.
ಎಂದು ತೇಜ ದಿನೇಶ್ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್,
ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನವು ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ.
ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ದಿನವು ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ ಎಂದು ಬಣ್ಣಿಸಿದರು.
ಧ್ವಜಾರೋಹಣ ನೆರವೇರಿಸಿದ ಶಾಲಾ ಎಸ್. ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ.ಜೆ.ರಜನಿಕಾಂತ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಎ.ಎಂ.ಜವರಯ್ಯ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕ ಎಂ.ಗೌತಮ್, ಉಪ ನಾಯಕಿ ಸ್ಪಂದನ, ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಇದಕ್ಕೂ ಮೊದಲು ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ದೈಹಿಕ ಕಸರತ್ತು , ವ್ಯಾಯಾಮ
ಪ್ರದರ್ಶನ ಹಾಗೂ
ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರತಿಬಿಂಬಿಸುವ ಪಿರಾಮಿಡ್ ರಚಿಸಿ ರಾಷ್ಟ್ರೀಯ ಧ್ವಜವನ್ನು ಎತ್ತಿ ಹಿಡಿದು ಗಮನ ಸೆಳೆದರು.
Back to top button
error: Content is protected !!