ಕುಶಾಲನಗರ. ಫೆ. 03: ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ 5 ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಮಡಿಕೇರಿ ಭೂಮಿ ಪೂಜೆ ನೆರವೇರಿಸಿದರು.
ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಪಂಚಾಯತ್ ರಾಜ್ ವಿಭಾಗಕ್ಕೆ ಸೇರಿದ ಕೂಡಿಗೆ ,ಕೂಡುಮಂಗಳೂರು, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆಯ ಡಾಂಬರೀಕರಣ, ಕಾಂಕ್ರೀಟಿಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಆಯಾ ಗ್ರಾಮಗಳಿಗೆ ತೆರಳಿ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳ ರಸ್ತೆಯ ಅಭಿವೃದ್ಧಿಗೆ ರಾಜ್ಯ ಸರಕಾರವು ವಿವಿಧ ಹಂತಗಳಲ್ಲಿ ಅನುದಾನ ನೀಡುತ್ತಿರುವ ಹಿನ್ನೆಲೆಯಲ್ಲಿ ಮತ್ತು ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅದರಂತೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತ ವತಿಯಿಂದ ಈ ಸಾಲಿನಲ್ಲಿ ಹೆಚ್ಚಾಗಿ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ ಸದಸ್ಯ ಮಂಜುನಾಥ್ ಗುಂಡೂರಾವ್, ನಟೇಶ್ ಗೌಡ, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಫಿಲೋಮಿನಾ, ಬಸವನಹಳ್ಳಿ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಆರ್.ಎಸ್. ಅರುಣ್ ರಾವ್, ಟಿ.ಪಿ.ಹಮೀದ್, ಅನಂತ, ಶಿವಕುಮಾರ್ ,ಚಂದ್ರು, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾಕುಮಾರಿ, ಮಾಜಿ ಅಧ್ಯಕ್ಷ. ರಾಜಶೇಖರ್, ಮಂಜುನಾಥ್, ಸದಸ್ಯರಾದ ಹೆಚ್. ಎಸ್, ಮಂಜುನಾಥ್, ಮಹದೇವ್, ಚಂದ್ರಶೇಖರ್ ಜೋಗಿ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೆ.ಎಸ್ ಕೃಷ್ಣೇ ಗೌಡ, ಟಿ.ಕೆ. ಪಾಂಡುರಂಗ, ಜಗದೀಶ್, ತೋಟೇಷ್, ಪಿ.ಡಿ ರವಿ, ವಸಂತ್, ಮಹದೇವ , ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯಪಾಲಕ ನಾರಾಯಣ ಮೂರ್ತಿ, ಇಂಜಿನಿಯರ್ ಕೀರ್ತನ್, ಪ್ರಮುಖರಾದ ರಂಜನ್ ಹೆಬ್ಬಾಲೆ ಸೇರಿದಂತೆ ಆಯಾ ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಗ್ರಾಮದ ವಿವಿಧ ಸಂಘಗಳ ಪ್ರಮುಖರು, ನೂರಾರು ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!