ಕುಶಾಲನಗರ, ಫೆ 09: ಸಾರ್ವಜನಿಕ ಸೇವೆಯಲ್ಲಿ ದಿನಂಪ್ರತಿ ಎಡೆಬಿಡದೆ ನಿರತರಾಗಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳು ಆಹ್ಲಾದ ಹಾಗೂ ಮನರಂಜನೆ ನೀಡಲು ಸಹಕಾರಿ ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಕೂಡಿಗೆಯ ಡಯಟ್ ಮೈದಾನದಲ್ಲಿ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಜೊತೆಯಲ್ಲಿ ಜಿಲ್ಲಾ ಆಸ್ಪತ್ರೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗಳಿಗೆ ಇಲಾಖೆಯ ವತಿಯಿಂದ ಅಭಿವೃದ್ಧಿಗೆ ಪೂರಕವಾಗುವಂತೆ ಅನುದಾನ ವನ್ನು ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ 5 ತಾಲ್ಲೂಕಿನ ಆರೋಗ್ಯ ಕೇಂದ್ರದ ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಭಾಗವಹಿಸಿದ್ದರು.
ವೇದಿಕೆಯಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಸೋಮವಾರಪೇಟೆ ಕಾಂಗ್ರೆಸ್ ಮುಖಂಡ ಯಾಕೂಬು, ಕುಶಾಲನಗರ ಪುರಸಭೆ ಸ್ಥಾಯಿಸಮಿತಿ ಸದಸ್ಯ ಸುರೇಶ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಶ್ರೀನಿವಾಸ್, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಇಂದೂಧರ್, ಡಾ. ಮಧುಸೂದನ್, ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಚೇತನ್, ಡಾ. ದರ್ಶನ್, ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಹೆಚ್.ಕೆ. ಶಾಂತಿ ಇದ್ದರು.
Back to top button
error: Content is protected !!