ಕಾರ್ಯಕ್ರಮ
ಹೊಲಿಗೆ ತರಬೇತಿ ಸಮಾರೋಪ ಸಮಾರಂಭ

ಕುಶಾಲನಗರ, ಫೆ 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಶಾಲನಗರ ವಲಯ ಇಂದಿರಾ ಬಡಾವಣೆ ಒಕ್ಕೂಟದ ಮಾದಾಪಟ್ಟಣ ಸಿಂಚನ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು, ನಮ್ಮಲ್ಲಿರುವ ವಿದ್ಯೆಯನ್ನು ಸರಿಯಾಗಿ ಬಳಸಿಕೊಂಡಾಗ ನಾವು ಯಶಸ್ಸು ಕಾಣಬಹುದು. ಮಹಿಳೆಯರು ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡು ಸಬಲರಾಗಬೇಕಿದೆ ಎಂದು ಕರೆ ನೀಡಿದರು.
ಯೂನಿಯನ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಪ್ರಕಾಶ್ ಅವರು ಸ್ವಉದ್ಯೋಗ ಬಗ್ಗೆ ಮಾಹಿತಿ ನೀಡಿದರು.