ಕುಶಾಲನಗರ, ಫೆ 15: ಕುಶಾಲನಗರದಲ್ಲಿ ಎರಡು ದಿನಗಳ ಶ್ರೀ ಮುತ್ತಪ್ಪಸ್ವಾಮಿ ತೆರೆ ಮಹೋತ್ಸವ ಪೂಜಾ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.
ವಿಭಿನ್ನತೆಯಲ್ಲಿ ಏಕತೆ ಎಂಬ ಸಾಮರಸ್ಯದ ಸಂದೇಶ ಸಾರುವ ನಿಟ್ಟಿನಲ್ಲಿ ಮುತ್ತಪ್ಪಸ್ವಾಮಿ ಸೇವಾಟ್ರಸ್ಟಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೆರೆಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ಧ್ವಜಾರೋಹಣದ ಸಂದರ್ಭದಲ್ಲಿ ವಿವಿಧ ಸಮಾಜಗಳ ಅಧ್ಯಕ್ಷರುಗಳು, ವಿವಿಧ ದೇವಾಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ,
ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ,ಒಕ್ಕಲಿಗ ಸಮಾಜದ ಅಧ್ಯಕ್ಷ ಕೆ.ಕೆ.ದಿನೇಶ್, ಹಿಂದು ಮಲೆಯಾಳ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯನ್,
ಕೇರಳಸಮಾಜದ ಅಧ್ಯಕ್ಷ ರವೀಂದ್ರನ್,ದೇವಾಂಗ ಸಮಾಜದ ಅಧ್ಯಕ್ಷ ಡಿ.ವಿ.ರಾಜೇಶ್, ಉಪ್ಪಾರಸಂಘದ ಪದಾಧಿಕಾರಿಗಳಾದ ಶಿವಕುಮಾರ್ ,ವೆಲ್ಲಾಳ ಸಂಘದ ಅಧ್ಯಕ್ಷ ಮುನಿಸ್ವಾಮಿ, ಆರ್ಯವೈಶ್ಯ ಸಮಾಜದ ಪದಾಧಿಕಾರಿಗಳು,
ಬಿಲ್ಲವ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.