ಕುಶಾಲನಗರ, ಜು 26: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಶಾಲನಗರ ತಾಲೂಕು ಸಮಿತಿ ವತಿಯಿಂದ 2021-22ನೇ ಸಾಲಿನಲ್ಲಿ ಕುಶಾಲನಗರ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಶಾಲೆಯ ಶಿಕ್ಷಕ ವೃಂದ ಹಾಗೂ ಪ್ರತಿಭಾನ್ವಿತ 6 ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಮಾಜ ಸೇವಕ, ಕಾಂಗ್ರೆಸ್ ಯುವ ಮುಖಂಡರಾದ ಡಾ.ಮಂಥರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಸುಶಿಕ್ಷಿತರಾಗಿ ಸಾಮಾಜಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹನೀಯರ ಆಶಯಗಳಂತೆ ಸಮಾಜದಲ್ಲಿ ಸಮಾನತೆ ಸಾಧಿಸಲು ತಮ್ಮ ಜವಾಬ್ದಾರಿ ನಿರ್ವಹಿಸಬೇಕಿದೆ ಎಂದರು. ಸಂಘಸಂಸ್ಥೆಗಳು, ದಾನಿಗಳು, ಅಧಿಕಾರಿ ವರ್ಗ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ನಿಂತು ಶಿಕ್ಷಣಕ್ಕೆ ಸಹಕಾರ ನೀಡಬೇಕಿದೆ ಎಂದು ಕರೆ ನೀಡಿದರು.
ತಾಲೂಕು ಸಮಿತಿ ಅಧ್ಯಕ್ಷ ಎಚ್.ಡಿ.ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ಮುಖ್ಯ ಭಾಷಣ ಮಾಡಿದರು. ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣವಾಗುತ್ತಿರುವುದು ದುರಂತ. ಪೋಷಕರ ಅಸೂಯೆಯಿಂದ ವಿದ್ಯಾರ್ಥಿಗಳು ಕೇವಲ ಪೈಪೋಟಿಗೆ ಸೀಮಿತವಾಗುತ್ತಿದ್ದಾರೆ.ವಿದ್ಯಾರ್ಥಿಗಳು ಬರೀ ಅಂಕಗಳಿಗೆ ಮಾತ್ರ ಸೀಮಿತವಾಗಬಾರದು. ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಸಾಮಾಜಿಕ ಮೌಲ್ಯಗಳನ್ನು ಬಿತ್ತಬೇಕಿದೆ. ಜ್ಞಾನಾರ್ಜನೆಗೆ ಪೂರಕವಾದ ಪುಸ್ತಕಗಳನ್ನು ಹೆಚ್ಚು ಅಭ್ಯಸಿಸಬೇಕಿದೆ ಎಂದರು.
ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಿಇಒ ಕೆ.ವಿ.ಸುರೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕುಶಾಲನಗರ ಪ.ಪಂ.ಸದಸ್ಯ ದಿನೇಶ್, ಶಾಲಾ ಮುಖ್ಯೋಪಾಧ್ಯಾಯ
ಪರಮೇಶ್ವರಪ್ಪ, ನಿವೃತ್ತ ತೋಟಗಾರಿಕಾ ಸಹಾಯಕ ಅಧಿಕಾರಿ ಎಚ್.ಬಿ.ಗಣೇಶ್, ಡಿ.ಎಸ್.ಎಸ್.
ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಸಂಘಟನಾ ಸಂಚಾಲಕ ಎಂ.ಪಿ.ಶಿವಪ್ಪ, ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್, ಕಾರ್ಯದರ್ಶಿ ಆದಂ, ಟಿ.ಆರ್.ಸತೀಶ್, ಶಿಕ್ಷಕ ಉ.ರಾ.ನಾಗೇಶ್, ಮಹೇಂದ್ರ ಇದ್ದರು.
ವಿದ್ಯಾರ್ಥಿ ತೃಪ್ತಿ ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ನಿರೂಪಿಸಿದರು.
Back to top button
error: Content is protected !!