ಕುಶಾಲನಗರ, ಫೆ 27 :ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸುವ ನಿಟ್ಟಿನಲ್ಲಿ ಫೆ.28 ರಂದು ಶುಕ್ರವಾರ ಅಳುವಾರದಿಂದ ಕುಶಾಲನಗರದ ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಗು ವಿವಿ ಸೇರಿದಂತೆ 9 ವಿವಿ ಮುಚ್ಚಲು ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, 16 ಕಿಲೋ ಮೀಟರ್ ಪಾದಯಾತ್ರೆ ನಡೆಸಲಿದ್ದಾರೆ. ಈ ಹೋರಾಟಕ್ಕೆ ಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ.ಈ ಜಾಥಾದಲ್ಲಿ ಸಂಸದ ಯದುವೀರ್ ಒಡೆಯರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು,ಪೋಷಕರು ಭಾಗವಹಿಸಲಿದ್ದಾರೆ ಎಂದರು.
ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಕಾಲ್ನಡಿಗೆ ಜಾಥಾವು ಕುಶಾಲನಗರ ವರೆಗೆ ನಡೆಯಲಿದ್ದು,ನಂತರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು.
ಕಳೆದ 20 ವರ್ಷಗಳ ಸತತ ಪ್ರಯತ್ನದ ನಂತರ ಪ್ರತ್ಯೇಕ ಕೊಡಗು ವಿವಿ ರಚನೆಗೊಂಡಿದೆ.ಈ ಹಿಂದೆ ಮಂಗಳೂರು ವಿವಿಯಲ್ಲಿ ರಿಜಿಸ್ಟರ್ ಆಗಿದ್ದ ಕಾವೇರಪ್ಪ ಅವರಲ್ಲಿ ಕೋರಿಕೊಂಡ ಮೇರೆಗೆ ಅವರು ಮೊದಲು ಪಿಜಿ ಸೆಂಟರ್ ಆರಂಭಿಸಲು ಸಹಕಾರ ನೀಡಿದರು.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭ ಮಂಗಳೂರು ವಿವಿ ವತಿಯಿಂದ ಅಳುವಾರದಲ್ಲಿ ಸ್ನಾತಕೋತ್ತರ ಕೇಂದ್ರ ತೆರೆಯಲಾಯಿತು. ನೂತನ ಸ್ನಾತಕೋತ್ತರ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಉದ್ಘಾಟಿಸಿದರು. ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗು ವಿವಿ ಸ್ಥಾಪಿಸಲಾಯಿತು. ಸ್ನಾತಕೋತ್ತರ ಕೇಂದ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಕೊಡಗು ವಿವಿಯಲ್ಲಿ 450 ವಿದ್ಯಾರ್ಥಿ ಗಳು ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಐದಾರು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೊಡಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೊಡಗು ವಿವಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು. ಅದೇ ರೀತಿ ಸಚಿವ ದಿನೇಶ್ ಗುಂಡೂರಾವ್ ಅವರಲ್ಲೂ ಮನವಿ ಮಾಡಿದ್ದೇವೆ.
ಜಿಲ್ಲೆಯ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಕೊಡಗು ವಿವಿ ಉಳಿಸಬೇಕು ಎಂದು ಒತ್ತಾಯಿಸಿದರು. ನಾನು ಶಾಸಕನಾಗಿದ್ದ ಸಂದರ್ಭ ಕುಶಾಲನಗರ, ಪೊನ್ನಂಪೇಟೆ ತಾಲ್ಲೂಕು ರಚನೆಯಲ್ಲಿ ವಿಶೇ ಪ್ರಯತ್ನ ಮಾಡಿದ್ದೇವೆ ಎಂದರು.
ಕೊಡಗು ವಿವಿ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಯಿಂದಲೂ ವಿವಿಧ ರೀತಿಯ ಹೋರಾಟ ನಡೆಸುತ್ತೇವೆ ಎಂದರು.
ಈ ಸಂದರ್ಭ ಮಂಡಲ ಅಧ್ಯಕ್ಷ ಗೌತಮ್ , ಉಪಾಧ್ಯಕ್ಷ ಅಜೀಜ್ ಕುಮಾರ್
ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಮುಖಂಡ ವೈಶಾಖ್ ಇದ್ದರು.
Back to top button
error: Content is protected !!