ಕುಶಾಲನಗರ, ಮಾ 03:ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೋಟೆಲ್ ಹಾಗೂ ಬಾರ್ ಗಳಲ್ಲಿ ಸ್ವಚ್ಛತೆಯನ್ನು ಕಾಪಾಡದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಓ ಮತ್ತು ಆಡಳಿತ ಮಂಡಳಿ ಸದಸ್ಯರು ದಿಡೀರ್ ದಾಳಿ ನಡೆಸಿ ಪರಿಶೀಲಿಸಿದರು.
ಈ ಸಂದರ್ಭ ಆಹಾರ ಪದಾರ್ಥಗಳನ್ನು ತಯಾರಿಸುವ ಪಾತ್ರೆಗಳು, ನೀರು ಹಾಗೂ ಅಡುಗೆಮನೆಯ ಸ್ವಚ್ಛತೆಯನ್ನು ಪರಿಶೀಲಿಸಲಾಯಿತು. ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ರೂ 5,000 ದಂಡ ವಿಧಿಸಿ ವಸೂಲಿ ಮಾಡಲಾಯಿತು.
Back to top button
error: Content is protected !!