ಕುಶಾಲನಗರ, ಮಾ. 4: ಮಡಿಕೇರಿ ಕ್ಷೇತ್ರದ ಮಾಜಿ ಕ್ರೀಡಾ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ನವರು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ 7 ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಸರಕಾರಿ ಪ್ರಾಥಮಿಕ, ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ವೆಟರ್ ಗಳನ್ನು ವಿತರಣೆ ಮಾಡಿದರು.
ಶಾಸಕ ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತಾನಾಡಿ ಈಗಾಗಲೇ ಜಿಲ್ಲೆಯಲ್ಲಿ 30. ಸಾವಿರಕ್ಕೂ ಹೆಚ್ಚು ಸ್ವೆಟರ್ ಗಳನ್ನು ವಿತರಣೆ ಮಾಡಲು ಗುರಿಹೊಂದಿದ್ದು, ಮಡಿಕೇರಿ, ಮತ್ತು ಸೋಮವಾರಪೇಟೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ವಿತರಣೆ ಮಾಡಲಾಗಿದೆ ವಿರಾಜಪೇಟೆ ತಾಲ್ಲೂಕಿನಲ್ಲಿಯೂ ವಿತರಣೆ ಮಾಡಲಾಗುವುದು. ಸರಕಾರಿ ಶಾಲಾ ವಿದ್ಯಾರ್ಥಿಗಳು ಹೆಚ್ಚು ಬಡತನ ರೇಖೆಯಲ್ಲಿರುವ ವಿದ್ಯಾರ್ಥಿಗಳೇ ಅಗಿರುತ್ತಾರೆ ಅವರುಗಳ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಪ್ರಮಾಣದ ಸೇವೆಯನ್ನು ಮಾಡಲಾಗುತ್ತಿದೆ ಅದರಂತೆಯೇ ಸರಕಾರಿ ಶಾಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿ, ವಿದ್ಯಾವಂತರಾಗಿ ತಮ್ಮ ಬದುಕನ್ನು ಹಸನಗೊಳಿಸಿಕೊಳ್ಳುವ ಮೂಲಕ. ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಮುಂದೆ ಬರಬೇಕು, ಅಲ್ಲದೆ ಉದ್ಯೋಗ ಮೂಲಕ ಗಳಿದ ಸ್ವಲ್ಪ ಹಣವನ್ನು ಸಮಾಜದ ಒಳಿತೆಗೆ ನೀಡುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಾಜಿ ಶಾಸಕರು ಶಿರಂಗಾಲ, ತೊರೆನೂರು, ಹೆಬ್ಬಾಲೆ ಕೂಡುಮಂಗಳೂರು, ಕೂಡಿಗೆ, ಮುಳ್ಳುಸೋಗೆ, ಗುಡ್ಡೆ ಹೊಸೂರು, ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ ಗರೀಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್, ಮಾಜಿ ಅಧ್ಯಕ್ಷರಾದ ಕೆ.ಕೆ.ಭೋಗಪ್ಪ, ಇಂದಿರಾ ರಮೇಶ್, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಪ್ರಕಾಶ್, ಉಪಾಧ್ಯಕ್ಷೆ ರೂಪ ಮಹೇಶ್, ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಕೂಡಿಗೆ ಸದ್ಗುರು ಅಪ್ಪಯ್ಯ ಪ್ರೌಢಶಾಲಾ ವ್ಯವಸ್ಥಾಪಕ ಬೋಸ್ ಮಂದಣ್ಣ, ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಿರಿಯ ಸಾಹಿತ್ಯಿ ಬಾಚರಂಡ ಅಪ್ಪಣ್ಣ, ಪೋಷಕರು ಪರಿಷತ್ತಿನ ಮಾಜಿ ಅಧ್ಯಕ್ಷ ಕೆ.ಕೆ ನಾಗರಾಜಶೆಟ್ಟಿ, ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ, ಪ್ರವೀಣ್, ಕೂಡಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ಗರೀಶ್, ಸೋಮವಾರಪೇಟೆಯ ಬಿಜೆಪಿ ಮಂಡಲದ ಪ್ರಮುಖರಾದ ಸೋಮೇಶ್ ,ಶರತ್, ಸೀಗೆಹೊಸೂರು ಧನಂಜಯ, ತೊರೆನೂರು ಗ್ರಾಮ ಪಂಚಾಯತಿ ಸದಸ್ಯರಾದ ದೇವರಾಜ್, ಶಿವಕುಮಾರ್, ಬೇಬಿಯಣ್ಣ, ಬಸವತ್ತೂರು ರವಿ, ಕೂಡುಮಂಗಳೂರು ಕೃಷ್ಣ, ರಾಘವೇಂದ್ರ, ಟೈಲರ್ ಜಯಂತ್, ಸುಬ್ಬಯ್ಯ, ಪ್ರಸನ್ನ, ಸೇರಿದಂತೆ 7. ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳು, ವಿವಿಧ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರರು, ವಿವಿಧ ಭಾಗದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.
Back to top button
error: Content is protected !!