ಕುಶಾಲನಗರ, ಮಾ 06: ಕೊಡಗು ಜಿಲ್ಲಾ ಪೊಲೀಸ್ ಸೋಮವಾರಪೇಟೆ ಉಪವಿಭಾಗದ ಆಶ್ರಯದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ರಾಜನ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಮಾದಕ ವಸ್ತುಗಳ ವಿಧ, ಅವುಗಳ ಬಳಕೆಯಿಂದ ವೈಯಕ್ತಿಕವಾಗಿ ಹಾಗೂ ಸಾಮಾಜಿಕವಾಗಿ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಮೂಲಕ ಅವರಲ್ಲಿನ ಜ್ಞಾನ ಪರಿಶೀಲಿಸಿದರು.
ಭಯೋತ್ಪಾದನೆ ಚಟುವಟಿಕೆಗಳಿಗೆ ಮಾದಕ ವಸ್ತುಗಳ ಉತ್ಪಾದನೆ, ಸರಬರಾಜು, ಬಳಕೆಯಿಂದ ಪೂರಕವಾಗಿ ಉಂಟಾಗಿವ ಅನುಕೂಲ ಅದರಿಂದ ದೇಶದ ಮೇಲೆ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿದರು. ಇದರೊಂದಿಗೆ ಸಂಚಾರಿ ನಿಯಮ ಉಲ್ಲಂಘನೆಯಿಂದ ಉಂಟಾಗುತ್ತಿರುವ ಅನಾಹುತಗಳ ಬಗ್ಗೆ ಮಾಹಿತಿ ಒದಗಿಸಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮೈಸೂರಿನ ಆರ್.ಎಫ್.ಎಸ್.ಎಲ್.ಸೈಂಟಿಫಿಕ್ ಅಧಿಕಾರಿ ಡಾ.ಈರಾಂಜನೇಯ ಉಪನ್ಯಾಸ ನೀಡಿದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲ ಪರಶಿವಮೂರ್ತಿ, ಸೋಮವಾರಪೇಟೆ ಉಪವಿಭಾಗ
ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಟೌನ್ ಪೊಲೀಸ್ ಠಾಣಾ ನಿರೀಕ್ಷಕ ಬಿ.ಜಿ.ಪ್ರಕಾಶ್, ಪ್ರಾಧ್ಯಾಪಕರಾದ ಡಾ.ಸತೀಶ್, ಡಾ.ಸೀನಪ್ಪ ಸೇರಿದಂತೆ ಪೊಲೀಸ್ ಠಾಣಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು.
Back to top button
error: Content is protected !!