ಆರೋಪ

ಜನಜಾಗೃತಿ ವೇದಿಕೆ ಪ್ರಮುಖರಿಂದ ಕುಶಾಲನಗರ ಪೊಲೀಸ್ ಠಾಣೆಗೆ ದೂರು

ಕುಶಾಲನಗರ, ಮಾ 18: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಮೂಡಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೂರು ನೀಡಿದ್ದಾರೆ.
ಹೆಗ್ಗಡೆ ಅವರನ್ನು ನಿಂದಿಸಿ ಕೋಟ್ಯಂತರ ಭಕ್ತಾದಿಗಳ ಮನಸ್ಸಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಗಿರೀಶ್ ಮಟ್ಟಣ್ಣನವರ್, ಸಂತೋಷ್ ಕುಮಾರ್, ರವೀಂದ್ರ ಶೆಟ್ಟಿ, ಸಮೀರ್, ಮಹೇಶ್ ಶೆಟ್ಟಿ, ಜಯಂತ್ ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳೀಯ ವ್ಯಕ್ತಿಗಳು ಸೇರಿ ದುರುದ್ದೇಶ ಪೂರಕವಾಗಿ ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹೇಳಿಕೆಗಳು ಸತ್ಯಕ್ಕೆ ದೂರವಾಗಿದ್ದು ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಯನ್ನು ಕೆಡಿಸುತ್ತಿದ್ದು ಜನರ ನಂಬಿಕೆ ಮೇಲೆ ಚೆಲ್ಲಾಟವಾಡುತ್ತಿದ್ದಾರೆ.
ಇಂತಹ ವ್ಯಕ್ತಿಗಳ ಮೇಲೆ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
ಮುಂದಿನ ದಿನಗಳಲ್ಲಿ ಸಮಾಜದ ಅಶಾಂತಿಗೆ ಹಾಗೂ ಹಿಂಸೆಗೆ ಕಾರಣವಾಗುವ ಸಾಧ್ಯತೆ ಇದ್ದು ಇವರ ಮೇಲೆ ಕೂಡಲೇ ಕಾನೂನು ಕ್ರಮ ದಾಖಲಿಸಿ ಬಂಧಿಸಲು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ನ ಕೊಡಗು ಜಿಲ್ಲಾ ಅಧ್ಯಕ್ಷ ಅಭಿಮನ್ಯು ಕುಮಾರ್ ಉಪಾಧ್ಯಕ್ಷ ರಂಗಸ್ವಾಮಿ ಕೊಡಗು ಜಿಲ್ಲಾ ಸದಸ್ಯರು ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಪಟ್ಟಣ ಪೊಲೀಸ್ ಠಾಣಾಧಿಕಾರಿ ಗೀತಾ ನೀಡಿದ್ದಾರೆ.

ಚಿತ್ರ ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷರು ಸದಸ್ಯರು ಠಾಣೆಗೆ ತೆರಳಿ ದೂರು ನೀಡಿದ ಸಂದರ್ಭ

Related Articles

Leave a Reply

Your email address will not be published. Required fields are marked *

Back to top button
error: Content is protected !!