ಕಾಮಗಾರಿ

ರೂ 3.85 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ.ಡಾ.ಮಂತರ್ ಗೌಡ ಭೂಮಿಪೂಜೆ

ಕುಶಾಲನಗರ, ಮಾ 26: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ರೂ 3.85 ಕೋಟಿ ವೆಚ್ಚದಲ್ಲಿ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ.ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು.
ಗೊಂದಿಬಸವನಹಳ್ಳಿ, ಮುಳ್ಳುಸೋಗೆ ಸೇರಿದಂತೆ ಪುರಸಭೆಯ ವಿವಿಧ ಬಡಾವಣೆಗಳಲ್ಲಿ ರಸ್ತೆಗಳು ಹಾಗೂ ಚರಂಡಿ‌ ನಿರ್ಮಾಣಕ್ಕೆ ಭೂಮಿಪೂಜೆ‌ ನೆರವೇರಿಸಿ ಮಾತನಾಡಿದ ಅವರು, ಸರಕಾರದಿಂದ ಕ್ಷೇತ್ರಕ್ಕೆ ಒದಗಿಸಿದ 25 ಕೋಟಿ ರೂಗಳಲ್ಲಿ ಜನಸಂಖ್ಯೆ ಹಾಗೂ ಬೇಡಿಕೆಗೆ ತಕ್ಕಂತೆ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಪಟ್ಟಣಗಳಿಗೆ ಸೇರಿದಂತೆ ಗ್ರಾಮೀಣ‌ ಭಾಗಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಂಚಿಕೆ‌ ಮಾಡಲಾಗಿದೆ. ಮುಂದೆಯೂ ಕೂಡ ಒದಗಿಸಲಾಗುವುದು. ಅಭಿವೃದ್ಧಿ ವಿಚಾರದಲ್ಲಿ‌ ಎಲ್ಲರ ಸಹಕಾರ ಅತಿ‌ಮುಖ್ಯ ಎಂದರು.

ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿದರು.

ಈ ಸಂದರ್ಭ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್‌ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್,
ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಅಭಿಯಂತರ ರಂಗರಾಮ್ ಸೇರಿದಂತೆ ಪುರಸಭೆ ಹಾಗೂ ಕುಡಾ ಸದಸ್ಯರುಗಳು, ಪಕ್ಷದ ಮುಖಂಡರು ಗ್ರಾಮಸ್ಥರ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!