ಕಾರ್ಯಕ್ರಮ

ಏಳು ಮಂತ್ರಗಳನ್ನು ಪಾಲಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ: ಡಿವೈಎಸ್ಪಿ ರವಿ ಅಭಿಮತ

ವಿರಾಜಪೇಟೆ, ಮಾ 27: ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಕೋಶ ಸಮಿತಿಯ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮ ಪ್ರಾರಂಭಿಸಲಾಗಿದ್ದು ಅದರ ಉದ್ಘಾಟನೆಯನ್ನು ಮಡಿಕೇರಿಯ ಸೆನ್ ಪೊಲೀಸ್ ಠಾಣೆಯ ಆರಕ್ಷಕ ಉಪ ಅದೀಕ್ಷಕರಾದ ರವಿಯವರು ನೆರವೇರಿಸಿ ಮಾತನಾಡಿ ನಾನು ಕಡುಬಡತನದಿಂದ ಬೆಳೆದು ಎರಡು ಬರಿ ಕೆಎಎಸ್ ಪರೀಕ್ಷೆಯಲ್ಲಿ ಯಶಸ್ವಿಯಾದೆ. ಪ್ರತಿಭೆ ಇಲ್ಲದಿದ್ದರೂ ಪರಿಶ್ರಮ ಪಟ್ಟರೆ ಯಶಸ್ಸು ಸಾಧಿಸಬಹುದು. ಮುಂದುವರಿದು ಏಳು ಮಂತ್ರಗಳನ್ನು ಪಾಲಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸುಲಭವಾಗಿ ಲಭಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಸುಹಾನ ಹಿಂದಿ ಉಪನ್ಯಾಸಕರು, ಲಾ ಸಾಲೆಟ್ ಪದವಿಪೂರ್ವ ಕಾಲೇಜು ಮರದೂರು, ಇವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರ ಮನಸ್ಥಿತಿ ಹೇಗಿರಬೇಕು ಹಾಗೂ ಸಮಯ ನಿರ್ವಹಣೆ, ಸ್ಪರ್ಧಾತ್ಮಕ ಪರೀಕ್ಷೆಗಳ ಕೌಶಲ್ಯಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಕೆ. ಸಿ ಯವರು ಮಾತನಾಡಿ ನಾವು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಕಾರ್ಯಕ್ರಮ ಆಯೋಜಿಸಿದ್ದೇವೆ ಅದರ ಅನುಕೂಲ ಪಡೆದುಕೊಂಡು ಜೀವನದಲ್ಲಿ ಯಶಸ್ಸು ಪಡೆಯಿರಿ ಎಂದು ತಿಳಿಸಿದರು. ಮುಂದುವರಿದು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸರ್ಟಿಫಿಕೇಟ್ ಕೋರ್ಸ್ ಅನ್ನು ಆರಂಭಿಸಿದ್ದೇವೆ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕರಾಗಿದ್ದ ಶ್ರೀ ರುದ್ರರವರು ಪ್ರಾಸ್ತವಿಕ ನುಡಿಯಲ್ಲಿ ಕಾರ್ಯಕ್ರಮದ ಯೋಜನೆ ಬಗ್ಗೆ ತಿಳಿಸಿ ಕಾರ್ಯಕ್ರಮದ ಅತಿಥಿಗಳನ್ನು ಸ್ವಾಗತಿಸಿದರು.ಕಾರ್ಯಕ್ರಮದ ಉದ್ಘಾಟಕರು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಂಶುಪಾಲರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಹ ಸಂಚಾಲಕರಾದ ಡಾ. ಬಸವರಾಜು ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us