ಕುಶಾಲನಗರ, ಮಾ 27:ರಾಜ್ಯ ರಾಜಕೀಯದಲ್ಲಿ ಇತ್ತೀಚೆಗೆ ನಡೆದ ಹನಿ ಟ್ರ್ಯಾಪ್ ವಿದ್ಯಮಾನಗಳು ಸಮಾಜದಲ್ಲಿ ಜನರು ಸಹನೆಯನ್ನು ಕಳೆದು ಕೊಳ್ಳುವ ಪ್ರಕರಣಗಳಾಗಿವೆ. ಇಂತಹ ಘಟನೆಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾವಲು ಪಡೆಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಬಗ್ಗೆ ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವಲು ಪಡೆ ಜಿಲ್ಲಾ ಅಧ್ಯಕ್ಷರಾದ ಎಂ ಕೃಷ್ಣ, ಇಂತಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬಹಿರಂಗವಾಗಿದ್ದು, ಇದರಲ್ಲಿ ನಮ್ಮನ್ನು ಆಳುವ ಜನಪ್ರತಿನಿಧಿಗಳು ಒಳಗೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ.
ಶಾಸಕಾಂಗ ಜನಪ್ರತಿನಿಧಿಗಳು ಕಾಮದಾಟಕ್ಕೆ ಸಿಲುಕಿ ನೈತಿಕತೆಯ ಅದಪ್ಪತನಕ್ಕೆ ಒಳಗಾಗಿದ್ದಾರೆ, ಇನ್ನೊಂದೆಡೆ ನ್ಯಾಯಾಂಗದ ಮೇಲೆ ಕೂಡ ಕಪ್ಪು ಚುಕ್ಕೆ ಬರುತ್ತಿದ್ದು ಈ ಬಗ್ಗೆ ಸಾಮಾನ್ಯ ಜನರು ವಿಶ್ವಾಸ ಕಳೆದುಕೊಳ್ಳುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇಂತಹ ಪ್ರಕರಣಗಳು ರಾಜ್ಯ ಅಲ್ಲದೆ ರಾಷ್ಟ್ರ ರಾಜಕಾರಣದಲ್ಲಿ ಕೂಡ ಚರ್ಚೆಯ ವಸ್ತುವಾಗಿರುವುದು ದುರಂತ ವಿಷಯ.
ಕೆಲವೊಂದು ಸರ್ಕಾರಿ ಹಿರಿಯ ಅಧಿಕಾರಿಗಳು ಕೂಡ ಇಂತಹ ಹನಿ ಟ್ರ್ಯಾಪ್ ಪ್ರಕರಣಗಳಲ್ಲಿ ಬಲಿಯಾಗುತ್ತಿರುವುದು ಇದರ ಹಿಂದೆ ಇರುವ ಕೈವಾಡಗಳನ್ನು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಇದೀಗ ಇಂತಹ ರಾಸಲೀಲೆಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಿದಂತೆ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿರುವುದು ಕೂಡ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ ಎಂದರು.
ಇನ್ನೊಂದೆಡೆ ನ್ಯಾಯಾಧೀಶರೊಬ್ಬರ ಮನೆಯಲ್ಲಿ ಅಕ್ರಮವಾಗಿ ಕಂಡು ಬಂದ ಹಣದ ರಾಶಿ ಈ ಬಗ್ಗೆ ರಾಷ್ಟ್ರಪತಿಗಳು ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು
ಜನರಲ್ಲಿ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾವಲು ಪಡೆಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾದ ವಿಜಯಕುಮಾರ್ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಇದ್ದರು.
Back to top button
error: Content is protected !!