ಕುಶಾಲನಗರ, ಮಾ 21: ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟದಿಂದ ಕೂಡಿದ್ದು ಸರಕಾರಿ ಶಾಲೆಗಳ ಉಳಿವಿಗೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ದಾನಿಗಳ ಸಹಕಾರ ಅಗತ್ಯವಿದೆ ಎಂದು ಮುಳ್ಳುಸೋಗೆ ಗ್ರಾಪಂ ಮಾಜಿ ಸದಸ್ಯ ಮಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗಿನಾದ್ಯಂತ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರು ಒದಗಿಸುತ್ತಿರುವ ಸ್ವೆಟರ್ ಗಳನ್ನು ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳ ಉಳಿವಿಗೆ ವಿದ್ಯಾರ್ಥಿಗಳ ಸಂಖ್ಯೆ ವೃದ್ದಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರುವ ಕೆಲಸವಾಗಬೇಕಿದೆ ಎಂದರು.
ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಾಗೂ
ಮುಂಬರುವ ಮಳೆಯನ್ನು ಗಮನದಲ್ಲಿರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಮಾಜಿ ಶಾಸಕರಾದ ಅಪ್ಪಚ್ಚುರಂಜನ್ ಅವರು ಜಿಲ್ಲೆಯಾದ್ಯಂತ ಒಟ್ಟು 30 ಸಾವಿರ ಸ್ವೆಟರ್ ವಿತರಣೆ ಯೋಜನೆ ಹಮ್ಮಿಕೊಂಡಿದ್ದಾರೆ. ಇದನ್ನು ವಿದ್ಯಾರ್ಥಿಗಳ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಕರೆ ನೀಡಿದರು.
ಶಾಲೆಯ ಒಟ್ಟು 99 ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಲಾಯಿತು.
ಈ ಸಂದರ್ಭ ಮುಳ್ಳುಸೋಗೆ ಗ್ರಾಪಂ ಮಾಜಿ ಸದಸ್ಯ ಕುಮಾರ್ ಜವರಪ್ಪ, ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ, ಶಾಲಾಭಿವೃದ್ದಿ ಸಮಿತಿ ಸದಸ್ಯೆ ಸಂತೋಷಿ, ಪೋಷಕರಾದ ಪರಮೇಶ್, ಪುಟ್ಟಮ್ಮ,ಕುಮಾರ,ಲತಾ, ಸಹ
ಶಿಕ್ಷಕರಾದ ಪ್ರತಿಮ, ಯಮುನಾ, ಶೋಭಾ, ಜಯಕಲಾ ಇದ್ದರು.
Back to top button
error: Content is protected !!