ಕಾರ್ಯಕ್ರಮ

ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗುವುದು: ಶಾಸಕ ಡಾ.ಮಂತರ್ ಗೌಡ

ಕುಶಾಲನಗರ, ಏ 07: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ದೇವಾಲಯದ ಅಭಿವೃದ್ಧಿಗೆ ಪೂರಕವಾದ ಯೋಜನೆಗೆ ಹೆಚ್ಚು ಒತ್ತು ನೀಡುವ ಮೂಲಕ ದೇವಾಲಯದ ಪ್ರಗತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದರು.
ಅವರು ರಾಮನವಮಿ ಬ್ರಹ್ಮ ರಥೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ಕುಣಿಯೋಣಾ ಬಾರ ನೃತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ದೇವಾಲಯದ ಸಮೀಪದಲ್ಲಿ ಕಾವೇರಿ ಅಂಚಿನಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನವನ್ನು ನೀಡಲಾಗಿ ಕಾಮಗಾರಿಯು ನಡೆದಿದೆ. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಕಣಿವೆ ತೂಗು ಸೇತುವೆಯ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಭಿವೃದ್ಧಿಗೆ ಪೂರಕವಾಗಿ ಮಾತಾನಾಡಿದರು.
ವೇದಿಕೆಯಲ್ಲಿ ಕಣಿವೆಯ ಹಿರಿಯ ಸಾಹಿತಿ ಭಾರದ್ವಾಜ್ ಕೆ. ಅನಂದತೀರ್ಥ, ದೇವಾಲಯ ಸಮಿತಿ ಅಧ್ಯಕ್ಷ ಕೆ. ಎನ್. ಸುರೇಶ್, ಸಹ ಕಾರ್ಯದರ್ಶಿ ಮಾಧವ, ಉಪಾಧ್ಯಕ್ಷ ಕೆ.ಕೆ. ಮಂಜುನಾಥ ಸ್ವಾಮಿ, ಗೌರವ ಅಧ್ಯಕ್ಷ ಇ. ಎಸ್. ಗಣೇಶ್, ಸಹ ಕಾರ್ಯದರ್ಶಿ ಕೆ.ಎಲ್. ಮಹೇಶ್ ಕುಮಾರ್, ನಿರ್ದೇಶಕರು ಸೇರಿದಂತೆ ಸಮಿತಿಯ ಸದಸ್ಯರುಗಳು ಹಾಜರಿದ್ದರು.
ಇದೇ ಸಂದರ್ಭ ಶಾಸಕ ಡಾ.ಮಂತರ್ ಗೌಡ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!