ಕ್ರೀಡೆ

ಕೂಡ್ಲೂರಿನಲ್ಲಿ ಆರಂಭಗೊಂಡ ಹೊನಲು- ಬೆಳಕಿನ ಕಬಡ್ಡಿ ಟೂರ್ನಿಗೆ ಶಾಸಕರಿಂದ ಚಾಲನೆ

ಕುಶಾಲನಗರ, ಏ 13: ದೇಸಿ ಹಾಗೂ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಆಟಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.
ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಶ್ರೀ
ಬಸವೇಶ್ವರ ಯುವಕ ಸಂಘದ ವತಿಯಿಂದ ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಆರಂಭಗೊಂಡ ಮೂರನೇ ವರ್ಷದ
ಹೊನಲು- ಬೆಳಕಿನ
ಕಬಡ್ಡಿ ಟೂರ್ನಿಯನ್ನು ಉದ್ಘಾಟಿಸಿ
ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದರು.
ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ.3 ಲಕ್ಷ ಅನುದಾನ ಒದಗಿಸುವುದಾಗಿ ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಗ್ರಾಮೀಣ ಕ್ರೀಡಾಕೂಟಗಳು ಅವಶ್ಯಕವಾಗಿದೆ. ಇದರಿಂದ ಗ್ರಾಮಗಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಒಗ್ಗಟ್ಟು, ಸೌಹಾರ್ದತೆ ಮೂಡುತ್ತದೆ. ಇಂತಹ ಕ್ರೀಡಾಕೂಟಗಳ ಮೂಲಕ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬಹುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಯುವಕರು ಗ್ರಾಮದಲ್ಲಿ ಕ್ರೀಡೆಯೊಂದಿಗೆ
ಸಾಂಸ್ಕೃತಿಕ ಚಟುವಟಿಕೆಗಳಿಗೂ ಕೂಡ ಹೆಚ್ಚಿನ ಆದ್ಯತೆ ನೀಡುವ ಮೂಲಕ ಭಾವೈಕ್ಯತೆ ಬೆಳೆಸಲು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಯುವಕ ಸಂಘದ ಅಧ್ಯಕ್ಷ ಕೆ.ವಿ.ನಿಶಾಂತ್ ಅಧ್ಯಕ್ಷತೆ ವಹಿಸಿದ್ದರು.
ಪ್ರೌಢಶಾಲಾ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಈರಪ್ಪ,
ದೈಹಿಕ ಶಿಕ್ಷಣ ಶಿಕ್ಷಕ ಕೆ.ಕೆ. ಚೇತನ್, ಯುವಕ ಸಂಘದ ಉಪಾಧ್ಯಕ್ಷ ಚರಣ್,
, ಕಾರ್ಯದರ್ಶಿ ಪ್ರಮೋದ್
, ಪದಾಧಿಕಾರಿಗಳಾದ ಪುನೀತ್, ಸುಮಂತ್,‌ ಗ್ರಾಮಸ್ಥರು
ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us