ಕುಶಾಲನಗರ, ಏ 23: ಗುಡ್ಡೆಹೊಸೂರು ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕೆ.ಸೌಮ್ಯ ಅವಿರೋಧವಾಗಿ ಆಯ್ಕೆಯಾದರು.
ಗುಡ್ಡೆಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ರುಕ್ಮಿಣಿ ಅವರ ವಿರುದ್ದ ಕಳೆದ 4 ತಿಂಗಳ ಹಿಂದೆ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ನ್ಯಾಯಾಲಯದ ಆದೇಶದಂತೆ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಸದಸ್ಯೆ ಕೆ.ಸೌಮ್ಯ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಕೆ.ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ತಹಶೀಲ್ದಾರ್ ಕಿರಣ್ ಗೌರಯ್ಯ ಘೋಷಣೆ ಮಾಡಿದರು. ಒಟ್ಟು 18 ಸದಸ್ಯರ ಪೈಕಿ
ಮೂರು ಸದಸ್ಯರು ಗೈರು ಹಾಜರಾಗಿದ್ದರು. ಈ ಸಂದರ್ಭ
ಸಹಾಯಕ ಚುನಾವಣಾಧಿಕಾರಿ ಲೋಹಿತ್
ಅಭಿವೃದ್ಧಿ ಅಧಿಕಾರಿ ಸುಮೇಶ್ ,ಉಪಾಧ್ಯಕ್ಷ ಪ್ರವೀಣ್ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ವಿಜಯೋತ್ಸವ : ಬಿಜೆಪಿ ಬೆಂಬಲಿತ ಸದಸ್ಯೆ ಕೆ.ಸೌಮ್ಯ ಗುಡ್ಡೆಹೊಸೂರು ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ತಾಲ್ಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಗೌತಮ್,
ಶಕ್ತಿ ಕೇಂದ್ರದ ಅಧ್ಯಕ್ಷ ಶಶಿಕುಮಾರ್ ಮುಖಂಡರಾದ
ಎಂ.ಆರ್.ಉತ್ತಪ್ಪ,
ಗಣೇಶ್,ಮಹೇಶ್, ಹರೀಶ್,
ಲಕ್ಷ್ಮಣ, ರಮೇಶ್,
ಎಂ.ಅಭಿಷೇಕ್ ,ಪ್ರಜ್ವಲ್ ,ಜೆಡಿಎಸ್ ಬೆಂಬಲಿತ ಸದಸ್ಯ ಶಿವಪ್ಪ ಭಾಗವಹಿಸಿದ್ದರು.
Back to top button
error: Content is protected !!