ಕುಶಾಲನಗರ: ಮೇ 02:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಪ್ರತಿಭಟನೆ ಕುಶಾಲನಗರದ ಶ್ರೀ ಗಣಪತಿ ದೇವಾಲಯ ಮುಂಭಾಗ ಹಮ್ಮಿಕೊಳ್ಳಲಾಗಿತ್ತು.
ವಿವಿಧ ಹಿಂದೂ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಘಟನೆ ಖಂಡಿಸಿ ಹತ್ಯೆ ಆರೋಪಿಗಳ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ಕೊಲೆಗಡುಕರನ್ನು ಬಂಧಿಸುವಂತೆ ಘೋಷಣೆ ಮೂಲಕ ಆಗ್ರಹಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚುರಂಜನ್, ಮಂಗಳೂರಿನಲ್ಲಿ ಜನಸಂದಣಿ ನಡುವೆ ಹಿಂದೂ ಕಾರ್ಯಕರ್ತನ ಹತ್ಯೆ ಭಯಾನಕ.
ಸಿದ್ದರಾಮಯ್ಯ ಸರಕಾರ ತಾಲಿಬಾನ್ ಆಡಳಿತ ನಡೆಯುತ್ತಿದೆ. ಜಿಹಾದಿ ಮನಸ್ಥಿತಿಯವರನ್ನು ಸರಕಾರ ಪೋಷಿಸಿ ಕುಮ್ಮಕ್ಕು ನೀಡುತ್ತಿದೆ. ಪಾಕ್ ವಿರುದ್ದ ಯುದ್ದಕ್ಕೆ ಕೂಡ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ. ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಕೂಡಲೆ ನಿಜವಾದ ಹತ್ಯೆ ಆರೋಪಿಗಳನ್ನು ಬಂಧಿಸಬೇಕು.
ಗೃಹ ಸಚಿವರು ಅಡ್ಡ ಗೋಡೆಯಲ್ಲಿ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಸ್ವತಃ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಅವರಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕೈಗೊಂಬೆಯಾಗಿದ್ದಾರೆ. ಹತ್ಯೆ ಆರೋಪಿಗಳನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು, ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ಹತ್ಯೆ ಪ್ರತಿಕಾರಕ್ಕೆ ಕೊಲೆಯಾಗಿದೆ ಎಂದು ಅನಾವಶ್ಯಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಲಾಗುತ್ತಿದೆ. ಗೋ ರಕ್ಷಣೆ, ಮತಾಂತರ ವಿರುದ್ದ, ಧರ್ಮ ರಕ್ಷಣೆ ಪರವಾಗಿ ಸದಾ ಹೋರಾಟ ನಡೆಸುತ್ತಿದ್ದ ಸುಹಾಸ್ ಶೆಟ್ಟಿಯನ್ನು ವ್ಯವಸ್ಥಿತವಾಗಿ ಕೊಲೆಮಾಡಿ ಹಿಂದೂ ಸಮಾಜವನ್ನು ಕೆಣಕುವ ಹಾಗೂ ಬೆದರಿಸಲು ಈ ಕೃತ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾಂಗ್ರೆಸ್ ಸರಕಾರ ಅಭಯದಿಂದ ಜಿಹಾದಿಗಳು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಕೊಲೆಯ ಹಿಂದಿರುವ ಶಕ್ತಿಗಳನ್ನು ಬಯಲಿಗೆಳೆಯಬೇಕಿದೆ ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ಸರಕಾರ ಒಂದು ವರ್ಗದ ಓಲೈಕೆ ಬಿಟ್ಟು ಎಲ್ಲರ ರಕ್ಷಣೆಗೆ ಮುಂದಾಗಬೇಕಿದೆ ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ
ಪ್ರಮುಖರಾದ ಎಂ.ಎಂ.ಚರಣ್, ಗೌತಮ್, ಎಂ.ಡಿ.ಕೃಷ್ಣಪ್ಪ, ಉಮಾಶಂಕರ್, ಭಾಸ್ಕರ್ ನಾಯಕ್, ಚಂದ್ರಶೇಖರ್ ಹೇರೂರು, ಅಮೃತ್ ರಾಜ್, ಮಧುಸೂದನ್, ವೈಶಾಖ್, ಜಿ.ಎಲ್.ನಾಗರಾಜ್, ಪ್ರವೀಣ್, ಪ್ರಶಾಂತ್, ಲಕ್ಷ್ಮೀನಾರಾಯಣ, ವರದ, ನವನೀತ್, ಆದರ್ಶ್, ವಿನೀತ್, ರಾಜೀವ, ಸಚಿನ್, ಅವಿನಾಶ್, ಸಂತೋಷ್, ಬೋಸ್ ಮೊಣ್ಣಪ್ಪ, ಮಂಜು, ಪ್ರದೀಪ್, ನಿತ್ಯಾನಂದ, ಸುಮನ್, ವಿನು, ಸೌಮ್ಯ ಮತ್ತಿತರರು ಇದ್ದರು.
Back to top button
error: Content is protected !!