ಶಿಕ್ಷಣ

ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಕುಶಾಲನಗರ, ಫೆ 11: ವ್ಯಾಸಂಗದ ಜತೆಯಲ್ಲಿ ಮಕ್ಕಳು ಸಾಂಸ್ಕೃತಿಕವಾಗಿಯೂ ಬೆಳೆಯುವಂತಾಗಬೇಕು.
ಎಂದು ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಹೇಳಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಕುಶಾಲನಗರದ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,
ಇಂದಿನ ಸಮಾಜದಲ್ಲಿ ಶಾರೀರಿಕ ಆರೋಗ್ಯದಂತೆ ಮಾನಸಿಕ ಆರೋಗ್ಯವೂ ಬಹಳ ಮುಖ್ಯ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮವಾದ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ದೃಢತೆಯನ್ನು ಬೆಳೆಸಬೇಕು ಎಂದು ಹೇಳಿದರು.
ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಸದಸ್ಯ ವಿ.ಎಸ್.ಆನಂದ್ ಕುಮಾರ್, ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆ ನೀಡಿಬೇಕು. ವಿದ್ಯೆ ಮನುಷ್ಯನನ್ನು ಬಾಳಿ ಬೆಳಸುತ್ತದೆ. ಎತ್ತರಕ್ಕೆ ಬೆಳದ ವ್ಯಕ್ತಿ ಸಮಾಜದ ಪ್ರಗತಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಅಧ್ಯಕ್ಷ ಎಸ್.ಕೆ.ಸತೀಶ್ ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಂದ ಜ್ಞಾನ ಮತ್ತು ನಾಯಕತ್ವ ಗುಣ ಬೆಳೆಯುತ್ತದೆ. ವಿದ್ಯಾರ್ಥಿ ಜೀವನ ಅತ್ಯಮೂಲವಾಗಿದ್ದು. ಓದಿನ ಕಡೆಗೆ ಗಮನಹರಿಸಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಭಾರತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದನ್ ಕುಮಾರ್, ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಅವಿನಾಶ್, ಗಯಾಜ್, ರಾಜು, ಮಮತಾ, ರೇಣುಕಾ, ದೈಹಿಕ ಶಿಕ್ಷಣ ಶಿಕ್ಷಕ ಸೋಮಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭ ಶಾಲಾ ಮಕ್ಕಳು ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಶಿಕ್ಷಕ ವೃಂದದವರಿಗೆ, ಮಕ್ಕಳ ಪೋಷಕರಿಗೆ ಹಾಗೂ ಎಸ್.ಡಿ.ಎಂ.ಸಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!