ಸಭೆ

ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಶಾಸಕರ ಸಭೆ

ಕುಶಾಲನಗರ, ಮೆ 27: ಜಿಲ್ಲೆಯ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿ ಗಳನ್ನು ಸಮರ್ಪಕವಾಗಿ ನಿರ್ವಹಣೆಗೆ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯು ಕೂಡಿಗೆಯ ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಮುಖವಾಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮದ ಬಗ್ಗೆ ಕೈಗೊಂಡಿರುವ ಮಾಹಿತಿ, ಮತ್ತು ಕಾಳಜಿ ಕೇಂದ್ರ ತೆರಯುವ ಬಗ್ಗೆ, ನೋಡಲ್ ಅಧಿಕಾರಿಗಳಿಂದ ಯಾವ ಹಂತದಲ್ಲಿ ಕಾರ್ಯವೈಖರಿ ನಡೆಯುತ್ತಿದೆ ಎಂಬ ಬಗ್ಗೆ, ಮತ್ತು ಚೆಸ್ಕಾಂ, ಅರಣ್ಯ ಇಲಾಖೆಯ ವತಿಯಿಂದ ಇದುವರೆಗೆ ಕೈಗೊಂಡ ಸಂಪೂರ್ಣ ಮಾಹಿತಿ ಬಗ್ಗೆ ಶಾಸಕರು ಸಭೆಯ ಮಾಹಿತಿಯನ್ನು ಪಡೆದು ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಯೋಜನೆ ಬಗ್ಗೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ 2025-26. ನೇ ಸಾಲಿನ ಅತಿವೃಷ್ಟಿ,ಅನಾವೃಷ್ಟಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಿದ್ದತೆ ಸೇರಿದಂತೆ, ಸ್ವಯಂಸೇವಕರ ನೇಮಕ, ಅತಿವೃಷ್ಟಿ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳ ಮಾಹಿತಿ, ಮತ್ತು ನಿಗದಿತ ಕೇಂದ್ರಗಳ ಮಾಹಿತಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ಮೊದಲು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಪ್ರವಾಹ ಸಂಭವಿಸಬಹುದಾದ ಸ್ಧಳಗಳ ಬಗ್ಗೆ ಮಾಹಿತಿ, ಮತ್ತು ಈಗಾಗಲೇ 292 ಮನೆಗಳಿಗೆ ತಿಳುವಳಿಕೆ ಪತ್ರ ನೀಡಲಾಗಿದೆ. ಮತ್ತು ಕಾಳಜಿ ಕೇಂದ್ರಗಳಲ್ಲಿ ಅಹಾರ ಕಿಟ್ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ‌ಗಿರೀಶ್ ಮಾಹಿತಿಯನ್ನು ಒದಗಿಸಿದರು.
ಜಿಲ್ಲಾಧಿಕಾರಿ ಕಛೇರಿಯ ಸೂಚನೆ ಯಂತೆ ‌ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕು ಕೇಂದ್ರ ಸ್ಧಳದಲ್ಲಿದ್ದು ಕೆಲಸ
ನಿರ್ವಹಿಸುವಂತೆ ಶಾಸಕರು ಖಾಡಕ್ ಸೂಚನೆಯನ್ನು ನೀಡಿದರು.
ನಂತರ ಪ್ರಮುಖವಾಗಿ ಚೆಸ್ಕಾಂ ಇಲಾಖೆ ಕಾರ್ಯಪಾಲಕ ಅಭಿಯಂತರ ಮಂಜುನಾಥ ನವರು ಸಭೆ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ 130. ವಿದ್ಯುತ್ ಕಂಬಗಳು ಸೇರಿದಂತೆ ಎರಡು ಟಿ.ಸಿ.ಮುರಿತಗೊಂಡ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಸರಿಪಡಿಸಲು ಕೈಗೊಂಡಕ್ರಮಗಳ ಬಗ್ಗೆ ಮಾಹಿತಿ ತಿಳಿಸಿದರು ಸರಕಾರದ ಆದೇಶ ಮೇರೆಗೆ ಹೊಸದಾಗಿ ಹೂರ ಜಿಲ್ಲೆಯ 7. ಮಂದಿ ಅಧಿಕಾರಿ, ಸೇರಿದಂತೆ ಸಿಬ್ಬಂದಿಗಳ ನೇಮಕ ಮಾಡಲಾಗಿದೆ ಅದರ ಮೂಲಕ ಕಾರ್ಯೊನ್ಮಖರಾಗಲು ನಮ್ಮ ಸಿಬ್ಬಂದಿ ಸಿದ್ದರಿದ್ದಾರೆ ಎಂದು ಚೆಸ್ಕಾಂ ಅಧಿಕಾರಿ ತಿಳಿಸಿದರು.
ನಂತರ ಅರಣ್ಯ ಇಲಾಖೆಯರು ಮುಂಜಾಗ್ರತಾ ಕ್ರಮವಾಗಿ ಬಿಳುವ ಹಂತದಲ್ಲಿರುವ ರಸ್ತೆಯ ಬದಿಯ ಮರಗಳನ್ನು ಕಡಿತಮಾಡಬೇಕು, ಮುನ್ನೆಚ್ಚರಿಕೆ ಕ್ರಮವಾಗಿ ಖಾಸಗಿ ಜಾಗದಲ್ಲಿರುವ ಮರಗಳು ಬಿಳುವ ಹಂತದಲ್ಲಿ ಇದ್ದರೆ ಅವುಗಳನ್ನು ಸಹ ಕಟ್ಟಾವು ಮಾಡಲು ಸಂಬಂಧಿಸಿದ ತೋಟದ ಮಾಲೀಕರಿಗೆ ಸೂಚನೆ ನೀಡಬೇಕು ಅಲ್ಲದೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಮರಗಳ ಕಟಾವುಗೆ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಶಾಸಕರು ಸೂಚನೆ ನೀಡಿದರು.
ಸಭೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸುಧೀರ್ಘ ಚರ್ಚೆಗಳು ನಡೆದವು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನವರು ಈಗಾಗಲೇ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆಯು ಬೀಳುತ್ತಿರುವ ಹಿನ್ನೆಲೆಯಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ತಮ್ಮಗೆ ವಹಿಸಿದ್ದ ಜವಾಬ್ದಾರಿಯನ್ನು ನಿಯಮಾನುಸಾರ ಕ್ರಮಬದ್ದವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಹಾಜರಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸಿದ್ದತೆ ಗಳ ಬಗ್ಗೆ ಸಭೆಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಕಾಯ್ದಿರಿಸಿದ ನಿವೇಶನ ಜಾಗ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಸೇರಿದಂತೆ ಮಳೆಯಿಂದಾಗಿ ಅಗುವ ಅನಾಹುತ ತಪ್ಪಿಸಲು ಎಲ್ಲಾ ಅಧಿಕಾರಿಗಳ ಸಹಕಾರ ಬಹು ಮುಖ್ಯವಾಗಿರುತ್ತದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು , ನೋಡಲ್ ಅಧಿಕಾರಿಗಳು ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿದರು.
ಸಭೆಯು ಕೂಡಿಗೆ ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಶಾಲನಗರ ತಾಲ್ಲೂಕು ತಹಶಿಲ್ದಾರರ ಕಿರಣ್ ಗೌರಯ್ಯ, ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಕುಶಾಲನಗರ ಯೋಜನಾ ಪ್ರಾಧಿಕಾರದ ‌‌ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು, ಮತ್ತು ಕೆ.ಡಿ.ಪಿ. ನಾಮ ನಿರ್ದೇಶಿತ ಸದಸ್ಯರಾದ ಕೆ. ಎನ್ ಆಶೋಕ್, ಟಿ. ಬಿ.ಜಗದೀಶ್, ಟಿ.ಪಿ. ಹಮೀದ್, ಸ್ವಾಮಿ, ಹನೀಫ್ ಸೇರಿದಂತೆ ಕಂದಾಯ, ನೀರಾವರಿ , ಲೋಕೋಪಯೋಗಿ, ಅಗ್ನಿ ಶಾಮಕದಳ, ಅರಣ್ಯ ಇಲಾಖೆ, ಚೆಸ್ಲಾಂ ಇಲಾಖೆ, ಪುರಸಭೆಯ ಮುಖ್ಯಾಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!